ನಾಳೆ KSRTC, BMTC ವ್ಯಾಪ್ತಿಯಲ್ಲಿ ಬಸ್ಸುಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ ಎಂದು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗೆ ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಸುದ್ದಿ ಬೆನ್ನಲ್ಲೇ ಈಗ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಬೆಳಗ್ಗೆ 11 ಗಂಟೆಯಿಂದ ಸಂಜೆ 5.30 ರವರೆಗೆ 4 ರಸ್ತೆ ಸಾರಿಗೆ ಸಂಸ್ಥೆಗಳ ವ್ಯಾಪ್ತಿಯ ವಿಭಾಗೀಯ ಕಛೇರಿಗಳ ಮುಂದೆ ಧರಣಿ ಸತ್ಯಾಗ್ರಹ ನಡೆಸಲು ಕರೆ ನೀಡಿರುವುದು ಸರಿಯಷ್ಟೇ.ಆದರೆ ಈ ಸಂಬಂಧ KSRTC ವ್ಯಾಪ್ತಿಯ ಬಸ್ಸುಗಳ ಕಾರ್ಯಾಚರಣೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗುವುದಿಲ್ಲ. ಬಸ್ಸುಗಳ ಕಾರ್ಯಚರಣೆಯು ಯಥಾಸ್ಥಿತಿಯಲ್ಲಿ ಇರಲಿದೆ.
ಇದನ್ನು ಓದಿ :- ಒಂದು ಪೈಸೆ ಲಂಚ ತೆಗೆದುಕೊಂಡಿದ್ದರೆ ರಾಜಕೀಯ ನಿವೃತ್ತಿ ಪಡೆದು ಸನ್ಯಾಸತ್ವ ಸ್ವೀಕರಿಸುವೆ- ಸಿದ್ಧರಾಮಯ್ಯ ಸವಾಲು