ರಾಜ್ಯದಲ್ಲಿ ಲಾಕ್ ಡೌನ್ ಮತ್ತು ಸೆಮಿ ಲಾಕ್ ಡೌನ್ ವಿಧಿಸುವ ಸಾಧ್ಯತೆಯೇ ಇಲ್ಲ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸರಕಾರದ ಜೊತೆ ಶುಕ್ರವಾರ ಸಭೆ ನಂತರ ಮಾತನಾಡಿದ ಅವರು, ಕೊರೊನಾ ಮಾರ್ಗಸೂಚಿ ಕುರಿತು ಸಂಜೆ ವೇಳೆ ಮಾರ್ಗಸೂಚಿ ಪ್ರಕಟಿಸಲಾಗುವುದು. ಈ ಬಾರಿ ನಿಯಮ ಕಟ್ಟುನಿಟ್ಟಾಗಿ ಅನುಸರಿಸಲಾಗುವುದು ಎಂದರು.
ಕೊರೊನಾ ಹೆಚ್ಚಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ, ಪಂಜಾಬ್ ನಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಸೋಂಕು ತಡೆಗೆ ನಿಗಾ ವಹಿಸಿ ಎಂದು ಕೇಂದ್ರದ ಕ್ಯಾಬಿನೆಟ್ ಕಾರ್ಯದರ್ಶಿ ಸೂಚಿಸಿದ್ದಾರೆ. ಲಸಿಕೆ ಹೆಚ್ಚಳಕ್ಕೆ ಸೂಚಿಸಿದ್ದಾರೆ. ಜನ ಹೆಚ್ಚು ಇರುವ ಕಡೆ ಹಾಗೂ ಕೈಗಾರಿಕೆ, ಐಟಿ ಸಂಸ್ಥೆಗಳಿಗೆ ಹೋಗಿ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ಅವರು ತಿಳಿಸಿದರು.
ನಿಯಮಗಳ ಬಿಗಿ ಪಾಲನೆಗೆ ಕೇಂದ್ರದ ಕ್ಯಾಬಿನೆಟ್ ಕಾರ್ಯದರ್ಶಿ ಸೂಚಿಸಿದ್ದಾರೆ. ಈಗಾಗಲೇ ಜಾತ್ರೆ, ಧಾರ್ಮಿಕ ಉತ್ಸವಗಳಿಗೆ ನಿಯಂತ್ರಿಸಿದ್ದೇವೆ. ಶಾಲೆಗಳನ್ನು ಭೌತಿಕವಾಗಿ ನಡೆಸುವುದು ಬೇಡ ಅಂತಲೂ ನಿರ್ಧರಿಸಲಾಗಿದೆ ಎಂದು ಅವರು ವಿವರಿಸಿದರು.