ಮಾರಕ ಕೋವಿಡ್-19 4ನೇ ಅಲೆ ಭೀತಿ ನಡುವೆಯೇ ಲಸಿಕೆ ಹಾಕಿಸಿಕೊಳ್ಳಲು ಯಾರನ್ನೂ ಒತ್ತಾಯಿಸಬಾರದು. ಲಸಿಕೆಯ ಅಡ್ಡಪರಿಣಾಮಗಳನ್ನು ಸಾರ್ವಜನಿಕಗೊಳಿಸಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಕೋವಿಡ್ ಲಸಿಕೆ ವಿಚಾರವಾಗಿ ಇಂದು ನಡೆದ ವಿಚಾರಣೆಯಲ್ಲಿ ಹಾಲಿ ಇರುವ ಕೇಂದ್ರ ಸರ್ಕಾರದ ಲಸಿಕೆ ನೀತಿಯನ್ನು ಅಸಮಂಜಸವೆಂದು ಹೇಳಲಾಗುವುದಿಲ್ಲ ಎಂದು ಹೇಳಿದ ಸರ್ವೋಚ್ಛ ನ್ಯಾಯಾಲಯ ಇದೇ ವೇಳೆ ಲಸಿಕೆ ಹಾಕಿಸಿಕೊಳ್ಳಲು ಯಾರನ್ನೂ ಒತ್ತಾಯಿಸಬಾರದು ಎಂದು ಹೇಳಿದೆ. ‘ಕೋವಿಡ್-19 ಲಸಿಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ದತ್ತಾಂಶವನ್ನು ಸಾರ್ವಜನಿಕಗೊಳಿಸಬೇಕು.
ಸಾರ್ವಜನಿಕ ಸ್ಥಳಗಳಿಗೆ ಲಸಿಕೆ ಹಾಕದ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂಧಿಸುವ ಕೆಲವು ರಾಜ್ಯ ಸರ್ಕಾರಗಳು, ಸಂಸ್ಥೆಗಳು ವಿಧಿಸಿರುವ ಷರತ್ತುಗಳು ಪ್ರಮಾಣಾನುಗುಣವಾಗಿಲ್ಲ ಮತ್ತು ಪ್ರಸ್ತುತ ಚಾಲ್ತಿಯಲ್ಲಿರುವ ಪರಿಸ್ಥಿತಿಗಳಲ್ಲಿ ನಿರ್ಬಂಧ ಹಿಂಪಡೆಯಬೇಕು. ಯಾವುದೇ ವ್ಯಕ್ತಿಗೆ ಬಲವಂತವಾಗಿ ಲಸಿಕೆ ಹಾಕಿಸಲು ಸಾಧ್ಯವಿಲ್ಲ. ಲಸಿಕೆ ಹಾಕಿಸಿಕೊಳ್ಳುವಂತೆ ಒತ್ತಾಯಕೂಡ ಮಾಡಬಾರದು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಇದನ್ನೂ ಓದಿ :- PSI ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿ ಬಂಧನ