ತವರು ಜಿಲ್ಲೆ ಹಾವೇರಿ ( HAVERI ) ಯಲ್ಲಿ ಆರಂಭವಾದ ೮೬ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನುಸಿಎಂ ಬೊಮ್ಮಾಯಿ ಉದ್ಘಾಟಿಸಿದ್ರು. ನಾನು ಮುಖ್ಯಮಂತ್ರಿಯಾದ ಅವಧಿಯಲ್ಲಿಯೇ ನನ್ನ ತವರು ಜಿಲ್ಲೆಯಲ್ಲಿಯೇ ಸಮ್ಮೇಳನ ಆಯೋಜನೆಯಾಗಿರುವುದು ನನಗೆ ಬಹಳ ಸಂತಸ ತಂದಿದೆ ಎಂದು ಸಿಎಂ ಬೊಮ್ಮಾಯಿ (BASAVARJ BOMMAI ) ಹೇಳಿದ್ದಾರೆ.
ಇಂದು ನನ್ನ ತವರು ಜಿಲ್ಲೆ ಹಾವೇರಿಯಲ್ಲಿ ಆರಂಭವಾದ ೮೬ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದೆನು.ನಾನು ಮುಖ್ಯಮಂತ್ರಿಯಾದ ಅವಧಿಯಲ್ಲಿಯೇ ನನ್ನ ತವರು ಜಿಲ್ಲೆಯಲ್ಲಿಯೇ ಸಮ್ಮೇಳನ ಆಯೋಜನೆಯಾಗಿರುವುದು ನನಗೆ ಬಹಳ ಸಂತಸ ತಂದಿದೆ. pic.twitter.com/9IQukWZOkT
— Basavaraj S Bommai (@BSBommai) January 6, 2023
ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಸಿಎಂ, ಆದಿ ಕವಿ ಅಮೋಘವರ್ಷ ನೃಪತುಂಗರಿಂದ ಆರಂಭವಾಗಿ, ರನ್ನ,ಪಂಪರಿಂದ ಹಿಡಿದು, 8 ಜನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರನ್ನು ಹೊಂದಿರುವ ದೇಶದ ಏಕೈಕ ಭಾಷೆ ನಮ್ಮ ಕನ್ನಡ ಎಂಬುದು ನಮಗೆ ಹೆಮ್ಮೆಯ ವಿಷಯ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಇದನ್ನು ಓದಿ :- ನಾನು ತಾಲಿಬಾನ್ನ 25 ಉಗ್ರರನ್ನು ಹೊಡೆದುರುಳಿಸಿದ್ದೆ- ಪ್ರಿನ್ಸ್ ಹ್ಯಾರಿ ಆತ್ಮಚರಿತ್ರೆ ‘ಸ್ಪೇರ್‘ನಲ್ಲಿ ಉಲ್ಲೇಖ
ಆದಿ ಕವಿ ಅಮೋಘವರ್ಷ ನೃಪತುಂಗರಿಂದ ಆರಂಭವಾಗಿ, ರನ್ನ,ಪಂಪರಿಂದ ಹಿಡಿದು, 8 ಜನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರನ್ನು ಹೊಂದಿರುವ ದೇಶದ ಏಕೈಕ ಭಾಷೆ ನಮ್ಮ ಕನ್ನಡ ಎಂಬುದು ನಮಗೆ ಹೆಮ್ಮೆಯ ವಿಷಯವಾಗಿದೆ. ಇದು ಕನ್ನಡ ಸಾಹಿತ್ಯದ ಆತ್ಮಶಕ್ತಿಯನ್ನು ತೋರಿಸುತ್ತದೆ.
1/2 pic.twitter.com/HySqegKhFr— Basavaraj S Bommai (@BSBommai) January 6, 2023
ಕನ್ನಡ ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಇದಕ್ಕೆ ಆಪತ್ತು ತರುವ ಯಾವುದೇ ಶಕ್ತಿ ವಿಶ್ವದಲ್ಲಿ ಇನ್ನೂ ಹುಟ್ಟಿಲ್ಲ ಮತ್ತು ಹುಟ್ಟುವುದೂ ಇಲ್ಲ ಎಂದು ಹೇಳಿದರು. ಇಡೀ ದೇಶದಲ್ಲಿ ಕನ್ನಡಕ್ಕೆ ಮಾತ್ರ ಎಂಟು ಜ್ಞಾನಪೀಠ ಪ್ರಶಸ್ತಿಗಳು ದೊರೆತಿವೆ. ದೇಶದ ಬೇರೆ ಯಾವ ಭಾಷೆಗೂ ಸಹ ಇಷ್ಟು ಜ್ಞಾನಪೀಠ ಪ್ರಶಸ್ತಿಗಳು ದೊರೆತಿಲ್ಲ. ಒಂದು ಭಾಷೆ ಒಂದು ಸಂಸ್ಕೃತಿ ಬೆಳೆಯಬೇಕಂದರೇ ಇದುವರೆಗೆ ನಡೆದ ಬಂದ ದಾರಿಯ ಸಿಂಹಾವಲೋಕನ ಮಾಡಬೇಕಾಗುತ್ತದೆ. ಆಗ ಅದು ಮುಂದಿನ ದಾರಿಯನ್ನು ನಿರ್ಧರಿಸುತ್ತದೆ ಎಂದರು. ಇಬ್ಬರು ಸರಸ್ವತಿ ಸಮ್ಮಾನ್ ಪುರಸ್ಕೃತರು ಸಹ ನಮ್ಮ ಕನ್ನಡ ನಾಡಿನಲ್ಲಿರುವುದು ವಿಶೇಷವಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ವಿಭಿನ್ನತೆಯಲ್ಲಿ ಅನೇಕತೆಯನ್ನು ಹೊಂದಿರುವ ಏಕೈಕ ಭಾಷೆ ನಮ್ಮ ಕನ್ನಡ ಭಾಷೆ. ಕರಾವಳಿ ಶೈಲಿಯ ಕನ್ನಡ, ಮೈಸೂರು ಕನ್ನಡ, ಉತ್ತರ ಕರ್ನಾಟಕ ಶೈಲಿಯ ಕನ್ನಡ, ಗಡಿ ನಾಡು ಕನ್ನಡ ಹೀಗೆ ಹತ್ತು ಹಲವು ಆಯಾಮಗಳಲ್ಲಿ ನಮ್ಮ ಕನ್ನಡ ಭಾಷೆ ಬೆಳೆಯುತ್ತಿದೆ ಎಂಬುದು ಹೆಮ್ಮೆಯ ವಿಷಯವಾಗಿದೆ. pic.twitter.com/W6DRQ7uQjj
— Basavaraj S Bommai (@BSBommai) January 6, 2023
ಕನ್ನಡ ಇಡೀ ಜಗತ್ತಿನಲ್ಲಿ ಅತ್ಯಂತ ಪ್ರಾಚೀನ ಭಾಷೆ. ಇದರರ್ಥ ಕನ್ನಡಿಗರ ಬದುಕು ಪುರಾತನ ಹಾಗೂ ಶ್ರೇಷ್ಠ. ಜಗತ್ತಿನಲ್ಲಿ ಕನ್ನಡ ಸಂಸ್ಕೃತಿ ಅತ್ಯಂತ ಪವಿತ್ರ ಮತ್ತು ಪುರಾತನ. ಇಂಥ ಕನ್ನಡದ ಕಂಪು ಭಾರತದಲ್ಲಿ ಮತ್ತೆ ಹೆಮ್ಮರವಾಗಿ ಬೆಳೆಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.
ಇದನ್ನು ಓದಿ :- ಸಿದ್ದರಾಮಯ್ಯ ವರುಣಾ ಬಿಟ್ಟು ಎಲ್ಲಿಯೂ ನಿಲ್ಲೋದು ಬೇಡ – ಜಮೀರ್ ಅಹಮ್ಮದ್