ಬೆಳಗಾವಿ (BELGAVI) ಭಾಗಕ್ಕೆ ವಂದೇ ಮಾತರಂ ರೈಲು ಯೋಜನೆ ಮತ್ತು ಕೆಲವೇ ದಿನಗಳಲ್ಲಿ ಮಹದಾಯಿ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗುವುದು ಎಂದು ಮಾಜಿ ಸಿಎಂ ಯಡಿಯೂರಪ್ಪ (YEDIURAPPA) ಹೇಳಿದ್ದಾರೆ. ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣ ಬಿಜೆಪಿ ವಿಜಯಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಜನಹಿತವನ್ನು ಸಂಪೂರ್ಣವಾಗಿ ಕಡೆಗಣಿಸಿತ್ತು. ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ಬಳಿಕ ದೇಶ ಅಭಿವೃದ್ಧಿ ಆಗುತ್ತಿದೆ ಎಂದು ಹೇಳಿದ್ರು.
ಬಿಜೆಪಿ (BJP)ಮತ್ತೆ ಅಧಿಕಾರಕ್ಕೆ ಬರೋದನ್ನು ಯಾರಿಂದಲೂ ತಡೆಯಲಾಗಲ್ಲ. ರಾಜ್ಯದಲ್ಲಿ ಬಿಜೆಪಿಗೆ 140 ಸೀಟ್ ತರಲು ಶ್ರಮಿಸೋಣ ಎಂದು ಬಿಎಸ್ವೈ ಹೇಳಿದರು. ಕೊಟ್ಟ ಕುದುರೆಯನ್ನು ಏರದವರು ವೀರನೂ ಅಲ್ಲ, ಧೀರನೂ ಅಲ್ಲ ಎಂದು ಕಾಂಗ್ರೆಸ್ ವಿರುದ್ದ ಕಿಡಿಕಾರಿದ್ರು. ಪ್ರಧಾನಿ ಮೋದಿ, ಅಮಿತ್ ಶಾ ನೇತೃತ್ವದಲ್ಲಿ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಯಾವುದೇ ಕ್ಷೇತ್ರವನ್ನು ಕಡೆಗಣಿಸಿಲ್ಲ ಎಂದು ಹೇಳಿದ್ರು.
ಇದನ್ನು ಓದಿ :- ಗೋಡೆ ಬರಹ ಅಭಿಯಾನದಲ್ಲಿ ಭಾಗಿಯಾದ ಅಮಿತ್ ಶಾ…!