ಮುಂಬರುವ ರಾಷ್ಟ್ರಪತಿ (President Election) ಚುನಾವಣೆಗೆ ಪ್ರತಿ ಪಕ್ಷದಿಂದ ಒಮ್ಮತದ ಅಭ್ಯರ್ಥಿ ಯಾರಾಗ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಪ್ರತಿಪಕ್ಷಗಳು ಪ್ರಸ್ತಾಪಿಸಿದ ಅಭ್ಯರ್ಥಿಗಳೆಲ್ಲಾ ಸ್ಪರ್ಧೆಯಿಂದ ಹಿಂದೆ ಸರಿಯುತ್ತಿದ್ದಾರೆ.
ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುವ ವಿರೋಧ ಪಕ್ಷಗಳ ಮನವಿಯನ್ನು ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ (Gopalkrishna Gandhi) ತಿರಸ್ಕರಿಸಿದ್ದಾರೆ. ಈ ಹಿಂದೆ ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ (Sharad power) ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ (Farooq Abdulla) ಕೂಡ ಹಿಂದೆ ಸರಿದಿದ್ದರು. ಇದೀಗ ಗೋಪಾಲಕೃಷ್ಣ ಗಾಂಧಿ ಕೂಡ ಪ್ರತಿಪಕ್ಷಗಳ ಆಫರ್ ತಿರಸ್ಕರಿಸಿದ್ದಾರೆ.
ರಾಷ್ಟ್ರಪತಿ ಚುನಾವಣೆಗೆ ತಮ್ಮ ಜಂಟಿ ಅಭ್ಯರ್ಥಿಯನ್ನು ಚರ್ಚಿಸಲು ಮುಂಬೈನಲ್ಲಿ ವಿರೋಧ ಪಕ್ಷಗಳ ನಿಗದಿತ ಸಭೆಗೆ ಮುಂಚಿತವಾಗಿ ಗೋಪಾಲಕೃಷ್ಣ ಗಾಂಧಿ ತಮ್ಮ ಹೇಳಿಕೆ ನೀಡಿದ್ದಾರೆ. ಇತ್ತೀಚಿಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಅವರ ಹೆಸರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೂಚಿಸಿದ್ದರು. ಗೋಪಾಕೃಷ್ಣ ಗಾಂಧಿ ರಾಷ್ಟ್ರಪತಿ ಮಹಾತ್ಮಾ ಗಾಂಧಿ (Mahathama Gandhi) ಅವರ ಮೊಮ್ಮಗ, ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ. 77 ವರ್ಷದ ಗೋಪಾಲಕೃಷ್ಣ ಗಾಂಧಿ ಈ ಹಿಂದೆ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದರು. ದಕ್ಷಿಣ ಆಫ್ರಿಕಾ ಹಾಗೂ ಶ್ರೀಲಂಕಾದಲ್ಲಿ ಭಾರತೀಯ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದರು. ಇದನ್ನೂ ಓದಿ : – ಉಕ್ರೇನ್ ಯುದ್ಧದಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಗ್ಯಾನ ಗೌಡರ್ ಕುಟುಂಬಕ್ಕೆ ಮೋದಿಯಿಂದ ಸಾಂತ್ವನ
ಜೂನ್ 15 ರಿಂದಲೇ ರಾಷ್ಟ್ರಪತಿ ಚುನಾವಣೆಯ ಪ್ರಕ್ರಿಯೆಗಳು ಆರಂಭವಾಗಿದ್ದು, ಜೂನ್ 29 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರಲಿದೆ. ಈವರೆಗೂ ಆಡಳಿತ ಹಾಗೂ ವಿಪಕ್ಷಗಳಿಂದ ಯಾವುದೇ ಅಭ್ಯರ್ಥಿಯ ಘೋಷಣೆಯಾಗಿಲ್ಲ. ಇದನ್ನೂ ಓದಿ : – ಮೈಸೂರಿನಲ್ಲಿ ಮೋದಿಗಾಗಿ ಕಲಾವಿದನಿಂದ ವಿಶೇಷ ಪೇಟ..!