ಪ್ರಧಾನಿ ಹುದ್ದೆಯ ಆಕಾಂಕ್ಷಿಯಲ್ಲ, ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಶ್ರಮಿಸುತ್ತೇನೆ -ನಿತೀಶ್ ಕುಮಾರ್

ಪ್ರಧಾನಿ ಹುದ್ದೆಯ ಆಕಾಂಕ್ಷಿ ನಾನಲ್ಲ. ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಶ್ರಮಿಸುತ್ತೇನೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ( nitish kumar ) ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಿಹಾರ ಸಿಎಂ, ನನಗೆ ಪ್ರಧಾನಿಯಾಗುವ ಯಾವುದೇ ಆಲೋಚನೆ ಇಲ್ಲ. ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನಿಸುತ್ತೇನೆ ಮತ್ತು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.


ಬಿಹಾರ( bihar ) ದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡ ನಂತರ ರಾಜಕೀಯ ಬಿರುಗಾಳಿಯನ್ನು ಉಂಟುಮಾಡಿದ್ದು, ನಿತೀಶ್ ಕುಮಾರ್ ಅವರು ತಾವು ಪ್ರಧಾನಿ ಹುದ್ದೆಯ ಆಕಾಂಕ್ಷಿ ಅಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಪ್ರಧಾನಿ ಹುದ್ದೆಯ ಮಹತ್ವಾಕಾಂಕ್ಷೆಗಳು ತಮ್ಮ ಮನಸ್ಸಿನಲ್ಲಿಲ್ಲ ಎಂದಿದ್ದಾರೆ. ಇದನ್ನೂ ಓದಿ : –  ನನ್ನ ಸತ್ಯ ಅವರಿಗೆ ಗೊತ್ತು, ಅವರ ಸತ್ಯ ನನಗೆ ಗೊತ್ತು – ಸಿದ್ದರಾಮಯ್ಯಗೆ ಟಾಂಗ್ ನೀಡಿದ ಸುಧಾಕರ್


ಆಗಸ್ಟ್ 10 ರಂದು ಎಂಟನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ, ನಿತೀಶ್ ಕುಮಾರ್ ಅವರು ಮುಂದಿನ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ( narendra modi ) ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಅವರು 2014 ರಲ್ಲಿ ಗೆದ್ದಿದ್ದಾರೆ, ಆದರೆ ಅವರು 2024 ರಲ್ಲಿ ಗೆಲ್ಲುತ್ತಾರೆಯೇ? ಎಂದು ಮತ್ತೊಮ್ಮೆ ಮೋದಿ ಪ್ರಧಾನಿಯಾಗಲ್ಲ ಎಂದು ಪರೋಕ್ಷವಾಗಿ ಹೇಳಿದ್ದರು.

ಇದನ್ನೂ ಓದಿ : –   ಮಂತ್ರಾಲಯದಲ್ಲಿ ವಿಜೃಂಭಣೆಯಿಂದ ನೆರವೇರಿದ ರಾಯರ ಪೂರ್ವಾರಾಧನೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!