ಅಶ್ಲೀಲ ಚಿತ್ರ ನಿರ್ಮಾಣ ಆರೋಪ ಸಂಬಂಧಿಸಿದಂತೆ ಉದ್ಯಮಿ ರಾಜ್ ಕುಂದ್ರಾ (Raj kundra) ಮತ್ತು ನಟರಾದ ಶೆರ್ಲಿನ್ ಚೋಪ್ರಾ (Sherlyn chopra) ಮತ್ತು ಪೂನಂ ಪಾಂಡೆ ಸೇರಿದಂತೆ ಇತರರಿಗೆ ಸುಪ್ರೀಂ ಕೋರ್ಟ್ (Supreme court) ನಿರೀಕ್ಷಣಾ ಜಾಮೀನು ನೀಡಿದೆ. ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್ ಮತ್ತು ಬಿ.ವಿ. ನಾಗರತ್ನ ಅವರಿದ್ದ ಪೀಠವು ರಾಜ್ ಕುಂದ್ರಾ ಮತ್ತು ಇತರ ಆರೋಪಿಗಳಿಗೆ ತನಿಖೆಗೆ ಸಹಕರಿಸುವಂತೆ ಸೂಚಿಸಿದೆ.
ಕಕ್ಷಿದಾರರ ಪರ ವಕೀಲ (Lawyer) ರ ವಾದವನ್ನು ಆಲಿಸಿದ ನಂತರ, ‘ಅರ್ಜಿದಾರರಿಗೆ ನಿರೀಕ್ಷಣಾ ಜಾಮೀನು ನೀಡಬಹುದು ಎಂದು ನಾವು ಭಾವಿಸುತ್ತೇವೆ’ ಎಂದು ಪೀಠ ಹೇಳಿದೆ. ಅರ್ಜಿದಾರರೊಬ್ಬರ ಪರ ವಾದ ಮಂಡಿಸಿದ ಹಿರಿಯ ವಕೀಲ ಆರ್ ಬಸಂತ್, ಪ್ರಕರಣದಲ್ಲಿ ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು, ಆರೋಪಿಗಳು ತನಿಖೆಗೆ ಪೊಲೀಸರಿಗೆ ಸಹಕರಿಸುತ್ತಿದ್ದಾರೆ ಎಂದಿದ್ದಾರೆ. ಈ ಪ್ರಕರಣದಲ್ಲಿ ರಾಜ್ ಕುಂದ್ರಾ ಅವರನ್ನು ಬಂಧಿಸದಂತೆ ಈ ಹಿಂದೆ ಸುಪ್ರೀಂ ಕೋರ್ಟ್ ಮಧ್ಯಂತರ ರಕ್ಷಣೆ ನೀಡಿತ್ತು. ಇದನ್ನು ಓದಿ : – ಭಾರತ-ಚೀನಾ ಗಡಿ ಘರ್ಷಣೆ- ಅರುಣಾಚಲ ಗಡಿಯಲ್ಲಿ ಪರಿಸ್ಥಿತಿ ‘ಸ್ಥಿರವಾಗಿದೆ’ ಎಂದ ಚೀನಾ
ಕುಂದ್ರಾ ವಿರುದ್ಧ ಭಾರತೀಯ ದಂಡ ಸಂಹಿತೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಮಹಿಳೆಯರ ಅಸಭ್ಯ ಪ್ರಾತಿನಿಧ್ಯ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಎಫ್ ಐ ಆರ್ ನಲ್ಲಿ ಶೆರ್ಲಿನ್ ಚೋಪ್ರಾ ಮತ್ತು ಪೂನಂ ಪಾಂಡೆಯನ್ನು ಸಹ ಆರೋಪಿಗಳೆಂದು ಹೆಸರಿಸಲಾಗಿದೆ.
ಇದನ್ನು ಓದಿ : – ನಾನು ಸಿಎಂ ಆದ್ಮೇಲೆ ಮೂರನೇ ಬಾರಿ ಚಾಮರಾಜನಗರಕ್ಕೆ ಹೋಗುತ್ತಿದ್ದೇನೆ – ಸಿಎಂ ಬೊಮ್ಮಾಯಿ