ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಚುನಾವಣೆ ಕುರಿತಂತೆ ಸಿಎಂ ಬೊಮ್ಮಾಯಿ ಚರ್ಚೆ ನಡೆಸುತ್ತಿದ್ದಾರೆ. ಇಂದು ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುವ ಸಾಧ್ಯತೆಯಿದೆ .
ಸಭೆಗೆ ಆಗಮಿಸರೋ ಉಸ್ತುವಾರಿ ಸಚಿವ ಅರುಣ್ ಸಿಂಗ್,ಸಿಎಂ ಬಸವರಾಜ್ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂಗಳಾದ ಯಡಿಯೂರಪ್ಪ ಹಾಗೂ ಜಗದೀಶ್ ಶೆಟ್ಟರ್ ಸೇರಿದಂತೆ ಪ್ರಮುಖ ನಾಯಕರು ಕೋರ್ ಕಮಿಟಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ : – ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ
ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಬಿಬಿಎಂಪಿ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆಗೂ ಸಿದ್ದತೆ ಮಾಡಿಕೊಳ್ಳಲು ಕೋರ್ಟ್ ಆದೇಶಿಸಿದೆ ರಾಜ್ಯಸಭೆಗೆ ಹಾಲಿ ಸದಸ್ಯರಾಗಿರುವ ನಿರ್ಮಲಾ ಸೀತಾರಾಮನ್ ಹಾಗೂ ಕೆ.ಸಿ. ರಾಮಮೂರ್ತಿ ಅವರನ್ನೇ ಮುಂದುವರೆಸುವ ಕುರಿತು ಚಿಂತನೆ ನಡೆಸಿದ್ದಾರೆ .ವಿಧಾನ ಸಭೆಯಿಂದ ವಿಧಾನ ಪರಿಷತ್ತಿಗೆ ಏಳು ಸ್ಥಾನಗಳಲ್ಲಿ ಬಿಜೆಪಿ ಶಾಸಕರ ಸಂಖ್ಯಾ ಬಲದ ಆಧಾರದಲ್ಲಿ ನಾಲ್ಕು ಸ್ಥಾನಗಳು ಬಿಜೆಪಿ ಪಕ್ಷಕ್ಕೆ ದೊರೆಯಲಿದೆ.ಹಾಲಿ ವಿಧಾನ ಪರಿಷತ್ ಸದಸ್ಯರಾಗಿರುವ ಲಕ್ಷ್ಮಣ ಸವದಿ ಹಾಗೂ ಲೆಹರ್ ಸಿಂಗ್ ಅವರನ್ನ ಪುನರಾಯ್ಕೆ ಮಾಡಬೇಕೊ ಅಥವಾ ಬೇರೆಯವರಿಗೆ ನೀಡಬೇಕೊ ಎನ್ನು ಲೆಕ್ಕಚಾರವೂ ನಡೆಯುತ್ತಿದೆ.
ಇದನ್ನೂ ಓದಿ : – ದಾವೋಸ್ ಪ್ರವಾಸಕ್ಕೆ ತೆರಳುವ ವಿಚಾರ ಇಂದು ತೀರ್ಮಾನ ಮಾಡ್ತೀವಿ – ಸಿಎಂ ಬೊಮ್ಮಾಯಿ