ಕೇಂದ್ರ ಸರ್ಕಾರವು ತೈಲದ ಮೇಲಿನ ಅಬಕಾರಿ ಸುಂಕ ಕಡಿತ ಮಾಡಿದ ಬಳಿಕ ಮೇ 22 ಭಾನುವಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ದೇಶಾದ್ಯಂತ ಇಳಿಕೆಯಾಗಲಿದೆ.
ಅಬಕಾರಿ ಸುಂಕವು ಪೆಟ್ರೋಲ್ ದರದ ಪ್ರತಿ ಲೀಟರ್ಗೆ 8 ರೂಪಾಯಿ ಮತ್ತು ಡೀಸೆಲ್ ದರದ ಪ್ರತಿ ಲೀಟರ್ ಮೇಲೆ 6 ರೂಪಾಯಿ ಕಡಿಮೆಯಾಗಲಿದೆ ಎಂದು ಕೇಂದ್ರ ನೇರ ತೆರಿಗೆ ಮತ್ತು ಸುಂಕ ಮಂಡಳಿ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ಗೆ ಬೆಲೆ ಸದ್ಯ 101.94 ಮತ್ತು ಡೀಸೆಲ್ 87.89 ರೂಪಾಯಿ ಇದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 96.72 ರೂಪಾಯಿ ಇದ್ದರೆ, ಲೀಟರ್ ಡೀಸೆಲ್ ಬೆಲೆ 89.62 ರೂಪಾಯಿ ಇದೆ.
ಇದನ್ನೂ ಓದಿ : – ಅಬಕಾರಿ ಸುಂಕ ಇಳಿಸಿದ ಕೇಂದ್ರ ಸರ್ಕಾರ- ಪೆಟ್ರೋಲ್ ಬೆಲೆ 9.5ರೂ, ಡೀಸೆಲ್ ದರ 7 ರೂ ಇಳಿಕೆ