ಡಾಲಿ ಧನಂಜಯ ಅಭಿನಯದ Once Upon A Time “ಜಮಾಲಿಗುಡ್ಡ” ಚಿತ್ರದ ಚಿತ್ರೀಕರಣ ಪೂರ್ಣ 

ಡಾಲಿ ಧನಂಜಯ(Dolly dhananjay) ನಾಯಕರಾಗಿ ನಟಿಸಿರುವ Once Upon A Time “ಜಮಾಲಿಗುಡ್ಡ” (Jamali gudda) ಚಿತ್ರದ (Movie) ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಚಿಕ್ಕಮಗಳೂರು, ಕುದುರೆಮುಖ, ಗೋಕರ್ಣ, ಶಿವಮೊಗ್ಗದಲ್ಲಿ ಎಂಭತ್ತು ದಿನಗಳ ಚಿತ್ರೀಕರಣ ನಡೆದಿದೆ.

ಮಾತಿನ ಜೋಡಣೆ ಸಹ ಅಂತಿಮ ಹಂತದಲ್ಲಿದೆ. ಸೆಪ್ಟೆಂಬರ್ 9 (September 9) ರಂದು ಚಿತ್ರವನ್ನು ಬಿಡುಗಡೆ (Movie release) ಮಾಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.ಇದು 90ರ ದಶಕದಲ್ಲಿ ನಡೆಯುವ ಕಥೆ. ಬಾರ್ ಸಪ್ಲೈಯರ್(Bar supplier) ಪಾತ್ರದಲ್ಲಿ ಡಾಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಈ ಚಿತ್ರದ ಡಾಲಿ ಅವರ ಫಸ್ಟ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅದಿತಿ ಪ್ರಭುದೇವ (Aditi prabhudeva) ವಿಭಿನ್ನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ರಕಾಶ್ ಬೆಳವಾಡಿ(Prakash belavadi) , ಭಾವನ ರಾಮಣ್ಣ (Bhavana ramanna) , ಕಾಮಿಡಿ ಕಿಲಾಡಿಗಳು ಸಂತು, ತ್ರಿವೇಣಿ, ಪ್ರಾಣ್ಯ, ನಂದ ಗೋಪಾಲ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ನಿಹಾರಿಕಾ ಮೂವೀಸ್ ಲಾಂಛನದಲ್ಲಿ ಶ್ರೀಹರಿ ನಿರ್ಮಾಣ ಮಾಡುತ್ತಿರುವ ಈ ಚಿತ್ರವನ್ನು ಕುಶಾಲ್ ಗೌಡ ನಿರ್ದೇಶಿಸುತ್ತಿದ್ದಾರೆ.  ಕಥೆ, ಚಿತ್ರಕಥೆಯನ್ನು ಕುಶಾಲ್ ಗೌಡ ಅವರೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಕಾರ್ತಿಕ್ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಸಂಕಲನ ಈ ಚಿತ್ರಕ್ಕಿದೆ. ಕುಟುಂಬ ಸಮೇತ ನೋಡಬಹುದಾದ ಸುಂದರ ಕಥಾಹಂದರದ ಈ ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆದಿದ್ದಾರೆ. ಇದನ್ನೂ ಓದಿ : – ಒಂಟಿ ಜೀವನಕ್ಕೆ ಗುಡ್ ಬೈ ಹೇಳಿದ ನಟ – ಫ್ಯಾಷನ್ ಡಿಸೈನರ್ ಕೈ ಹಿಡಿಯಲಿರೋ ಜೆಕೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!