ಕಾರವಾರ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್ ಸೋಂಕಿನ ಅಬ್ಬರ ಹೆಚ್ಚುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ನಗರದ ಖಾಸಗಿ ಶಾಲೆಯೊಂದರಲ್ಲಿ 21 ವಿದ್ಯಾರ್ಥಿಗಳು ಹಾಗೂ ಇಬ್ಬರು ಶಿಕ್ಷಕರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ.
ಕೆಲ ದಿನಗಳ ಹಿಂದೆ 10 ನೇ ತರಗತಿ ವಿದ್ಯಾರ್ಥಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿತ್ತು. ಬಳಿಕ ವಿದ್ಯಾರ್ಥಿ ಸಂಪರ್ಕ ಹೊಂದಿದ್ದ 123 ವಿದ್ಯಾರ್ಥಿಗಳ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ವರದಿ ಬಂದಿದ್ದು, 21 ವಿದ್ಯಾರ್ಥಿಗಳಿಗೆ ಹಾಗೂ ಇಬ್ಬರು ಶಿಕ್ಷಕರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ.
ಸದ್ಯ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪೋಷಕರಲ್ಲಿ ಆತಂಕ ಮನೆ ಮಾಡಿದೆ. ಇವರ ಸಂಪರ್ಕದಲ್ಲಿರುವ ಇನ್ನೂ ಎಷ್ಟು ಜನರಿಗೆ ಕೊರೋನಾ ಸೋಂಕು ತಗುಲಿದೆಯೋ ಎಂಬ ಆತಂಕ ಕಾಡುತ್ತಿದೆ.
ಸಂಸ್ಥೆಯಲ್ಲಿ ಕನ್ನಡ ಪ್ರೌಢಶಾಲೆಯ ಆವರಣ ಪ್ರತ್ಯೇಕವಾಗಿದೆ. ಹಾಗಾಗಿ ಸಮೀಪದಲ್ಲಿರುವ ಇಂಗ್ಲಿಷ್ ಮಾಧ್ಯಮ ಹಾಗೂ ಕಾಲೇಜು ವಿಭಾಗದ ವಿದ್ಯಾರ್ಥಿಗಳು ಆತಂಕ ಪಡಬೇಕಾಗಿಲ್ಲ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ