ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ED ಕ್ರಮ ಮತ್ತು ಪಕ್ಷದ ಮುಖಂಡರನ್ನು ದೆಹಲಿ ಪೊಲೀಸರು ಬಂಧಿಸಿರುವುದನ್ನು ವಿರೋಧಿಸಿ ಕರ್ನಾಟಕದ ಕಾಂಗ್ರೆಸ್ ನಾಯಕರು ಇಂದು ರಾಜಭವನಕ್ಕೆ ಮುತ್ತಿಗೆ ಹಾಕಲಿದ್ದಾರೆ.
ಬೆಳಗ್ಗೆ 9:30 ರ ವೇಳೆಗೆ ಕೆಪಿಸಿಸಿ ಕಚೇರಿಯಿಂದ ರಾಜ್ಭವನ್ ವರಗೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಬೃಹತ್ ರ್ಯಾಲಿ ನಡೆಸಲಿದ್ದು, ನಗರದಲ್ಲಿ ಟ್ರಾಫಿಕ್ ಜಾಮ್ ಆಗಿದೆ . ಬುಧವಾರ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಂಸದರು ಮತ್ತು ಶಾಸಕರು ಸೇರಿದಂತೆ ಪಕ್ಷದ ಮುಖಂಡರು ಬೆಳಿಗ್ಗೆ 10 ಗಂಟೆಗೆ ಪಕ್ಷದ ಕಚೇರಿಯಿಂದ “ರಾಜ್ಭವನ್ ಚಲೋ’ ಪುತಿಭಟನಾ ರ್ಯಾಲಿ ನಡೆಸಿದ್ದಾರೆ. ಸೇಡಿನ ರಾಜಕಾರಣ ಮತ್ತು ಕೇಂದ್ರೀಯ ಸಂಸ್ಥೆಗಳ ದುರುಪಯೋಗದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಶಿವಕುಮಾರ್ ಹೇಳಿದ್ದಾರೆ. ರಾಹುಲ್ ಗಾಂಧಿ ಅವರನ್ನು ಮೂರು ದಿನಗಳ ಕಾಲ ವಿಚಾರಣೆ ನಡೆಸಿದಾಗ ಎರಡರಿಂದ ಮೂರು ಗಂಟೆಗಳಲ್ಲಿ ವಿಚಾರಣೆಯನ್ನು ಪೂರ್ಣಗೊಳಿಸಬಹುದಿತ್ತು.
ಆದರೆ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸುವ ಷಡ್ಯಂತ್ರ ಇದಾಗಿದೆ ಎಂದು ಶಿವಕುಮಾರ್ ಹೇಳಿದರು. ಕ್ರೀನ್ ರೋಡ್ ಇಂಡಿಯನ್ ಎಕ್ಸ್ ಪ್ರೆಸ್, ಬಿಪಿಒ ಸಿಗ್ನಲ್ ಮೂಲಕ ರ್ಯಾಲಿ ರಾಜ್ ಭವನ ತಲುಪಲಿದೆ ಹಾಗಾಗಿ ಕ್ರೀನ್ ರೋಡ್, ಇಂಡಿಯನ್ ಎಕ್ಸ್ ಪುಸ್, ವಸಂತನಗರ, ಶಿವಾಜಿನಗರ, ಕೋಲ್ ಪಾರ್ಕ್, ನಂದಿದುರ್ಗ ರಸ್ತೆ ವಿಧಾನ ಸೌಧ, ಕೆ.ಆ ಸರ್ಕಲ್ ಸೇರಿದಂತೆ ಬೆಂಗಳೂರಿನ ಎಲ್ಲಾ ಭಾಗದಲ್ಲಿ ಸಂಚಾರ ದಟ್ಟಣೆ ಸಾಧ್ಯತೆ ಇದೆ. ಕಾಂಗ್ರೆಸ್ ಕಾರ್ಯಕರ್ತರು ಕೇಸುಗಳಿಗೆ ಹೆದರಿ ಜೈಲಿಗೆ ಹೋಗುವುದಿಲ್ಲ, ಅನ್ಯಾಯದ ವಿರುದ್ಧ ನಿರಂತರ ಪ್ರತಿಭಟನೆ ನಡೆಸುತ್ತೇವೆ ದೇಶದಲ್ಲಿ ಸದ್ಯ ಬ್ರಿಟಿಷರ ಆಡಳಿತಕ್ಕಿಂತ ಹದಗೆಟ್ಟ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೇಂದ್ರವು ರಾಜಕೀಯ ಸೇಡಿಗಾಗಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವುದನ್ನು ನಿಲ್ಲಿಸುವವರೆಗೂ ಇದರ ವಿರುದ್ಧ ಪ್ರತಿಭಟನೆ ಮುಂದುವರಿಸುವುದಾಗಿ ಸಿದ್ದರಾಮಯ್ಯ ಹೇಳಿದರು. ಶುಕ್ರವಾರ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನಾ ಪ್ರದರ್ಶನಗಳನ್ನು ನಡೆಯಲಿದೆ. ಇದನ್ನೂ ಓದಿ : – ಗುಜರಾತ್ ಬಳಿಕ ಕರ್ನಾಟಕದಲ್ಲೂ ಮೋದಿ ಹವಾ