ಕರ್ನಾಟಕ( karanaratak ) ದ ಕರಾವಳಿ ( karavali ) ಮತ್ತು ದಕ್ಷಿಣ ಒಳನಾಡಿನ ಎಲ್ಲ ಭಾಗದಲ್ಲೂ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಇಂದು ‘ಆರೆಂಜ್ ಅಲರ್ಟ್’ ( orange alert ) ಘೋಷಿಸಲಾಗಿದೆ.
ಮಲೆನಾಡು ಭಾಗದಲ್ಲಿ, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಕೂಡ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಿಗೆ ಕೂಡ ಇಂದು ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಇದನ್ನೂ ಓದಿ : – ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಬ್ರಿಟನ್ ರಾಣಿ ಎಲಿಜಬೆತ್ ನಿಧನ – ಪ್ರಧಾನಿ ನರೇಂದ್ರ ಮೋದಿ ಸಂತಾಪ
ಕರ್ನಾಟಕದ 10 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಅಬ್ಬರದ ಮಳೆ ಸುರಿಯಲಿದೆ. ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಇಂದಿನಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್, ರಾಯಚೂರು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಇಂದಿನಿಂದ ಸೆ. 11ರವರೆಗೆ ‘ಹಳದಿ ಅಲರ್ಟ್’ ನೀಡಲಾಗಿದೆ.
ಇದನ್ನೂ ಓದಿ : – ಲಡಾಖ್ ನ ಗೋಗ್ರಾ ಪ್ರದೇಶದಿಂದ ತಮ್ಮ ಸೇನೆಗಳನ್ನು ಹಿಂಪಡೆದ ಭಾರತ-ಚೀನಾ