ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3.60 ಲಕ್ಷ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 3293 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,79,97,267ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 2 ಲಕ್ಷ ಗಡಿ ದಾಟಿದೆ.
ದೇಶದಲ್ಲಿ ಒಟ್ಟಾರೆ ಗುಣಮುಖಿತರ ಸಂಖ್ಯೆ 1,48,17,371ಕ್ಕೆ ಜಿಗಿತ ಕಂಡಿದ್ದರೆ, ಸಕ್ರಿಯ ಪ್ರಕರಣಗಳ ಸಂಖ್ಯೆ 29,78,709ಕ್ಕೆ ತಲುಪಿದೆ.