ನವದೆಹಲಿ : ಆಕ್ಸಿಜನ್ ಪೂರೈಕೆಯಲ್ಲಿ ಉಂಟಾದ ವ್ಯತ್ಯದಲ್ಲಿ ಒಂದೇ ದಿನ 25 ಮಂದಿ ಕೊರೊನಾ ರೋಗಿಗಳು ಮೃತಪಟ್ಟಿರುವ ಘಟನೆ ದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ನಡೆದಿದೆ.
ಗಂಗಾರಾಮ್ ಆಸ್ಪತ್ರೆಯಲ್ಲಿ ಸುಮಾರು 500 ಕ್ಕೂ ಹೆಚ್ಚು ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಐಸಿಯುನಲ್ಲಿ ದಾಖಲಾಗಿರುವವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಹರಸಾಹಸ ಪಡಲಾಗುತ್ತಿದೆ. ಆಸ್ಪತ್ರೆಯ ಐಸಿಯು ವಿಭಾಗಗಕ್ಕೆ ಸಂಪರ್ಕಿಸುವ ಆಕ್ಸಿಜನ್ ವ್ಯವಸ್ಥೆ ಕೂಡ ಸರಿಯಾಗಿಲ್ಲ. ಮತ್ತು ನಿಗಿದಿತ ಪ್ರಮಾಣದಲ್ಲಿ ಆಮ್ಲಜನಕ ಸಿಗದ ಕಾರಣ ಕಳೆದ 24 ಗಂಟೆಯಲ್ಲಿ 25ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಕ್ಸಿಜನನ್ನು ತುರ್ತಾಗಿ ಏರ್ ಲಿಫ್ಟ್ ಮೂಲಕ ಆಸ್ಪತ್ರೆಗೆ ವ್ಯವಸ್ಥೆ ಮಾಡಿ. ಇನ್ನೂ 60 ರೋಗಿಗಳ ಜೀವ ಗಂಡಾಂತರದಲ್ಲಿದೆ ಎಂದು ಸರ್ ಗಂಗಾರಾಮ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರು ಮನವಿ ಮಾಡಿಕೊಂಡಿದ್ದಾರೆ.
ತುರ್ತಾಗಿ ಆಕ್ಸಿಜನ್ ಪೂರೈಕೆ ಮಾಡಿ ಎಂದು ಆಸ್ಪತ್ರೆ ಕೇಳಿಕೊಂಡ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ವ್ಯವಸ್ಥೆ ಮಾಡಿ ಆಕ್ಸಿಜನ್ ಕಳುಹಿಸಿದ್ದು ಆಕ್ಸಿಜನ್ ಟ್ಯಾಂಕರ್ ಗಳು ಆಗಮಿಸಿವೆ.