ಕಲಬುರ್ಗಿ: ಆಕ್ಸಿಜನ್ ಸಿಗದೇ ನಾಲ್ವರು ರೋಗಿಗಳು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕು ಅಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.
ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು ರೋಗಿಗಳಿಗೆ ಮುಂಜಾನೆ 4 ಗಂಟೆ ಸುಮಾರಿಗೆ ಆಕ್ಸಿಜನ್ ಸಿಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಅಫಜಲಪುರ ತಾಲ್ಲೂಕು ಆಸ್ಪತ್ರೆಗೆ ಆಕ್ಸಿಜನ್ ಪೂರೈಕೆಯಾಗಿಲ್ಲ. ಆಕ್ಸಿಜನ್ ಸಿಗದೆ ಕೊರೋನಾ ಸೋಂಕಿತರು ಪರದಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೇ 24 ರೋಗಿಗಳು ಸಾವನ್ನಪ್ಪಿದ್ದರು, ಇದೀಗ ಕಲಬುರಗಿಯಲ್ಲೂ ಇಂತಹ ಘಟನೆ ನಡೆದಿದೆ.