ಚಾಮರಾಜನಗರ: ಜಿಲ್ಲಾಸ್ಪತ್ರೆಯಲ್ಲಿ ನಿನ್ನೆ ರಾತ್ರಿ 12 ಗಂಟೆಯಿಂದ 3 ಗಂಟೆಯವರೆಗೆ ಮೂವರು ಕೊರೊನಾ ಸೋಂಕಿತರ ಮಾತ್ರ ಆಕ್ಸಿಜನ್ ಸಿಗದೇ ಸಾವನ್ನಪ್ಪಿದ್ದಾರೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಸರ್ಕಾರ ತನಿಖೆ ನಡೆಸುತ್ತಿದೆ. ತನಿಖೆಯ ನಂತರ ಸತ್ಯಾಸತ್ಯತೆ ಹೊರಬರಲಿದೆ. ಚಾಮರಾಜನಗರ ಜಿಲ್ಲಾ ಕೋವಿಡ್ ಕೇರ್ ಸೆಂಟರ್ ನಲ್ಲಿ 16 ಜನರು ವೆಂಟಿಲೇಟನ್ ನಲ್ಲಿ, ಎನ್‌ಐಪಿ ಮೇಲೆ 36, 58 ಜನರು ಆಕ್ಸಿಜನ್, 29 ಜನರು ಆಕ್ಸಿಜನ್ ಮೇಲೆ ಇದ್ದಾರೆ. ಒಟ್ಟು 123 ಜನರು ಕೋವಿಡ್ ಕೇರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದರು.
16 ರಿಂದ 18 ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ತೀವ್ರ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ. 12 ಗಂಟೆಯಿಂದ 3 ಗಂಟೆಯವರೆಗೆ ಮೂವರು ರೋಗಿಗಳು ಸಾವನ್ನಪ್ಪಿದ್ದಾರೆ. 3 ರಿಂದ ಬೆಳಿಗ್ಗೆ 7 ಗಂಟೆಯವರೆಗೆ 7 ಜನ ರೋಗಿಗಳು ಸೇರಿದಂತೆ ಒಟ್ಟು 23 ಜನರು ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರೇ, ಕಾಮಗೆರೆಯಲ್ಲಿ ಒಬ್ಬರು ಸೇರಿದಂತೆ 24 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.