ಕಾಶ್ಮೀರದಲ್ಲಿ 370ನೇ ವಿಧಿ ಮರು ಜಾರಿ ಮಾಡುವವರೆಗೂ ಭಾರತದ ಜೊತೆ ಮಾತುಕತೆ ಸಾಧ್ಯವಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ಭಾರತದ ಜೊತೆ ಮಾತುಕತೆ ಸಾಧ್ಯವೇ ಇಲ್ಲ ಎಂದು ಇಮ್ರಾನ್ ಖಾನ್ ಸ್ಪಷ್ಟಪಡಿಸಿದ್ದಾರೆ ಎಂದು ಸ್ಥಳೀಯ ಪಿಟಿವಿ ನ್ಯೂಸ್ ವರದಿ ಮಾಡಿದೆ.
ಜಮ್ಮು-ಕಾಶ್ಮೀರದಲ್ಲಿನ 370ನೇ ವಿಧಿ ರದ್ದು ಮಾಡುವ ಮೂಲಕ ವಿಶೇಷಾಧಿಕಾರವನ್ನು ಕೇಂದ್ರ ಸರಕಾರ ರದ್ದು ಮಾಡಿ 2 ವರ್ಷಗಳೇ ಕಳೆದಿದೆ. ಇತ್ತೀಚೆಗೆ ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದು ಮಾಡಿಕೊಳ್ಳಲು ವಿದೇಶಾಂಗ ಸಚಿವ ನೀಡಿದ್ದ ಆದೇಶವನ್ನು ಸಚಿವ ಸಂಪುಟ ಸಭೆಯಲ್ಲಿ ರದ್ದುಗೊಳಿಸಲಾಗಿತ್ತು.