ಪರೇಶ್ ಮೇಸ್ತ (paresh mesta ) ಕೊಲೆ ಆರೋಪಿಯನ್ನು ವಕ್ಫ್ ಬೋರ್ಡ್ ಉಪಾಧ್ಯಕ್ಷನನ್ನಾಗಿ ಮಾಡ ಹೊರಟಿರುವುದು ಅಕ್ಷಮ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ( SIDDARAMAIAH) ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಚುನಾವಣೆಗಳು ಹತ್ತಿರ ಬಂದಾಗಲೆಲ್ಲ ಇದ್ದಕ್ಕಿದ್ದಂತೆ ಅಮಾಯಕರ ಕೊಲೆಗಳು ನಡೆಯುತ್ತವೆ. ಬಿಜೆಪಿ ಸರ್ಕಾರಗಳು ಬಿಕ್ಕಟ್ಟಿಗೆ ಸಿಲುಕಿಕೊಂಡಾಗಲೆಲ್ಲ ಅಹಿತಕರ ಘಟನೆಗಳು ನಡೆಯುತ್ತವೆ. ಸಂಘ ಪರಿವಾರದ ಮಾಜಿ ಮುಖಂಡರಾಗಿದ್ದ ಮಹೇಂದ್ರ ಕುಮಾರ್ ಅವರು ಬಿಜೆಪಿಯ ಕುರಿತು ಸಂಘ ಪರಿವಾರದ ಕುರಿತು ಹಲವಾರು ಭಯಾನಕ ಸಂಗತಿಗಳನ್ನು ಸಮಾಜದ ಮುಂದೆ ಇಟ್ಟಿದ್ದರು. ನಾಡಿನ ಜನರು ಈ ಕುರಿತು ಗಂಭೀರವಾಗಿ ಚಿಂತಿಸಬೇಕಾಗಿದೆ ಎಂದಿದ್ದಾರೆ.
ಹೊನ್ನಾವರದಲ್ಲಿ 2017ರಲ್ಲಿ ನಡೆದಿದ್ದ ಪರೇಶ್ ಮೇಸ್ತ ಕೊಲೆಯ ಪ್ರಮುಖ ಮತ್ತು ಮೊದಲ ಆರೋಪಿ ಆಝಾದ್ ಅಣ್ಣಿಗೇರಿಯನ್ನು ರಾಜ್ಯ ಸರ್ಕಾರ ವಕ್ಫ್ ಬೋರ್ಡ್ ಉಪಾಧ್ಯಕ್ಷನನ್ನಾಗಿ ನೇಮಕ ಮಾಡಿರುವುದು ಗಂಭೀರವಾದ ಅನುಮಾನಗಳನ್ನು ಸೃಷ್ಟಿಸಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ : – BSY ನಿವಾಸಕ್ಕೆ ಬಸವರಾಜ ಬೊಮ್ಮಾಯಿ, ಕುತೂಹಲ ಕೆರಳಿಸಿದ ಮಾತುಕತೆ
ಪರೇಶ್ ಮೇಸ್ತ ಕೊಲೆಗೂ ಆಝಾದ್ ಅಣ್ಣಿಗೇರಿ ಸರ್ಕಾರಿ ನೇಮಕಾತಿಗೂ ಇರುವ ಒಳ ಒಪ್ಪಂದ ಏನು ಎನ್ನುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಮುಖ್ಯಮಂತ್ರಿ ಬೊಮ್ಮಾಯಿ ( BASAVARAJ BOMMAI ) ಅವರು ನಾಡಿಗೆ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ : – ಪ್ರಧಾನಿ ಹುದ್ದೆಯ ಆಕಾಂಕ್ಷಿಯಲ್ಲ, ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಶ್ರಮಿಸುತ್ತೇನೆ -ನಿತೀಶ್ ಕುಮಾರ್