ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಸತತವಾಗಿ ಏರಿಕೆ ಮಾಡಲಾಗುತ್ತಿದ್ದು, ಮಾರ್ಚ್ 22 ರಂದು ಆರಂಭವಾದ ಬೆಲೆ ಏರಿಕೆ ಸತತವಾಗಿ ಹೆಚ್ಚುತ್ತಲೇ ಇದೆ.
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಎನ್ನುವಂತೆ ಏರುತ್ತಲೇ ಇದೆ. ಅದರ ಪರಿಣಾಮ ಕಳೆದ ಎರಡು ವಾರಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ ಸರಾಸರಿ ₹ 8.40 ಹೆಚ್ಚಾಗಿದೆ.
ಇಂದು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ಗೆ 40 ಪೈಸೆ ಹೆಚ್ಚಿಸಲಾಗಿದೆ. ದೆಹಲಿಯಲ್ಲಿಂದು ಪೆಟ್ರೋಲ್ ಬೆಲೆ ಒಂದು ಲೀಟರ್ಗೆ ₹ 103.81 ಮುಟ್ಟಿದೆ. ಲೀಟರ್ ಡೀಸೆಲ್ ಬೆಲೆ ₹ 95.07 ತಲುಪಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 109.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.23 ರೂಪಾಯಿ ದಾಖಲಾಗಿದೆ.