ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರದಲ್ಲಿ ಅಲ್ಪ ಪ್ರಮಾಣದ ಏರಿಕೆ ಕಂಡು ಬಂದಿದ್ದರೂ ದೇಶದಲ್ಲಿ ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಳಿಕೆ ಆಗಿದೆ.
ಪೆಟ್ರೋಲ್ ಲೀಟರ್ ಗೆ 22 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್ ಗೆ 23 ಪೈಸೆಯಷ್ಟು ಇಳಿಕೆಯಾಗಿದೆ. ಇದರಿಂದ ಸತತವಾಗಿ ದೇಶದಲ್ಲಿ ತೈಲದರಲ್ಲಿ ಇಳಿಕೆ ಕಂಡು ಬರುತ್ತಿದೆ.
ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ ಗೆ 90.78 ರೂ.ನಿಂದ 90.56 ರೂ.ಗೆ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 80.87 ರೂ.ಗೆ ಇಳಿದಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 97ರೂ.ಗಿಂತ ಕೆಳಗೆ ಇಳಿದರೆ, ಡೀಸೆಲ್ ಬೆಲೆ 88 ರೂ.ಗೆ ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 93.59 ರೂ. ಹಾಗೂ ಡೀಸೆಲ್ ಬೆಲೆ 85.75ರೂ.ಗೆ ಇಳಿಕೆಯಾಗಿದೆ. ಈ ಮೂಲಕ ಸತತ ಬೆಲೆ ಏರಿಕೆಯಿಂದ ತತ್ತರಿಸಿದ್ದ ಗ್ರಾಹಕರು ಸ್ವಲ್ಪಮಟ್ಟಿಗೆ ಸಮಾಧಾನ ಪಡುವಂತಾಗಿದೆ.