ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಶುಕ್ರವಾರ ಮತ್ತೆ ಏರಿಕೆ ಕಂಡಿದ್ದರಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಪೆಟ್ರೋಲ್ ದರ ಶತಕ ದಾಟಿದೆ.
ದೇಶದಲ್ಲಿ ಈಗಾಗಲೇ ಇಂಧನ ದರ ಸಾರ್ವಕಾಲಿಕ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಲೇ ಇದ್ದು, ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಣ್ಮುಚ್ಚಿ ಕುಳಿತಿವೆ.
ಭಾರತದ ತೈಲ ಕಂಪನಿಗಳು ಪೆಟ್ರೋಲ್ ದರವನ್ನು 27 ಪೈಸೆ ಹಾಗೂ ಡೀಸೆಲ್ ದರವನ್ನು 28 ಪೈಸೆಯಷ್ಟು ಏರಿಕೆ ಮಾಡಿವೆ. ಇದರಿಂದ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಪೆಟ್ರೋಲ್ ದರ ಶತಕ (100.17 ರೂ.) ದಾಟಿದರೆ ಡೀಸೆಲ್ ದರ 92.97 ರೂ.ಗೆ ಏರಿಕೆಯಾಗಿದೆ.