ಚೀನಾದಿಂದ ಆಮದು ಆಗುತ್ತಿದೆ ಎಂದು ಹೇಳಲಾಗದ ಪ್ಲಾಸ್ಟಿಕ್ ಅಕ್ಕಿ ದಾವಣಗೆರೆಯಲ್ಲಿ ಕಾಣಿಸಿಕೊಂಡಿದ್ದು, ಸ್ಥಳೀಯ ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಬೆಳ್ಳೂಡಿ ಗ್ರಾಮದಲ್ಲಿನ ಅಂಗನವಾಡಿ ಕೇಂದ್ರಕ್ಕೆ ವಿತರಿಸಲಾದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.
ಅಂಗವಾಡಿ ಕೇಂದ್ರದಲ್ಲಿ ಪ್ಲಾಸ್ಟಿಕ್ ಮಾದರಿಯ ಅಕ್ಕಿ ಪತ್ತೆಯಾಗಿದ್ದು ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಪ್ಲಾಸ್ಟಿಕ್ ಅಕ್ಕಿಯ ಮಾದರಿಯನ್ನು ಅನ್ನ ಮಾಡಲು ಬೇಯಿಸಿದ್ದು ಈ ವೇಳೆ ಪ್ಲಾಸ್ಟಿಕ್ ಅಂಶ ಪತ್ತೆಯಾಗಿದೆ ಎನ್ನಲಾಗಿದೆ.