ದೇಶಾದ್ಯಂತ ಹಿಂದಿ ರಾಷ್ಟ್ರ ಭಾಷೆಯ ಪರ-ವಿರೋಧ ಚರ್ಚೆಗಳು ವ್ಯಾಪಕವಾಗಿರುವಂತೆಯೇ ಇತ್ತ ಪ್ರಧಾನಿ ಮೋದಿ ಕೋರ್ಟ್ ಗಳಲ್ಲಿ ಸ್ಥಳೀಯ ಭಾಷೆ ಬಳಕೆ ಪರ ಬ್ಯಾಟ್ ಬೀಸಿದ್ದಾರೆ.
ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳ ಬಳಕೆಗೆ ಪ್ರಧಾನಿ ನರೇಂದ್ರ ಮೋದಿ ಪ್ರಬಲವಾದ ಒತ್ತಾಯ ಹೇರಿದ್ದಾರೆ, ಇದು ನ್ಯಾಯ ವ್ಯವಸ್ಥೆಯಲ್ಲಿ ಸಾಮಾನ್ಯ ನಾಗರಿಕರ ವಿಶ್ವಾಸವನ್ನು ಹೆಚ್ಚಿಸುತ್ತದೆ. ಅವರು ಅದರೊಂದಿಗೆ ಹೆಚ್ಚು ಸಂಪರ್ಕ ಹೊಂದುತ್ತಾರೆ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ನಡೆದ ಮುಖ್ಯಮಂತ್ರಿಗಳು ಮತ್ತು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಮೋದಿ ನಾವು ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳನ್ನು ಪ್ರೋತ್ಸಾಹಿಸಬೇಕಾಗಿದೆ. ಇದು ನ್ಯಾಯ ವ್ಯವಸ್ಥೆಯಲ್ಲಿ ಸಾಮಾನ್ಯ ನಾಗರಿಕರ ವಿಶ್ವಾಸವನ್ನು ಹೆಚ್ಚಿಸುವುದಲ್ಲದೆ, ಅವರು ಅದರೊಂದಿಗೆ ಹೆಚ್ಚು ಸಂಪರ್ಕ ಹೊಂದುವಂತೆ ಮಾಡುತ್ತದೆ ಎಂದು ಹೇಳಿದರು.
ಇದನ್ನೂ ಓದಿ :- ಮೈಸೂರಿಗೆ ಭೇಟಿ ನೀಡಲಿದ್ದಾರೆಯೇ ಪ್ರಧಾನಿ ಮೋದಿ?