ದೇಶದಲ್ಲಿ ಕೊರೊನಾ ಎರಡನೇ ಅಬ್ಬರದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಪಶ್ಚಿಮ ಬಂಗಾಳದಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ರ್ಯಾಲಿಯನ್ನು ರದ್ದುಗೊಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಪ್ರಧಾನಿ ಮೋದಿ ಶುಕ್ರವಾರ ಚುನಾವಣಾ ರ್ಯಾಲಿಗಳಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಕೋವಿಡ್ ಪರಿಸ್ಥಿತಿ ಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ರ್ಯಾಲಿಯನ್ನು ರದ್ದುಗೊಳಿಸಿ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ದೇಶದಲ್ಲಿನ ಕೊರೊನಾ ಪರಿಸ್ಥಿತಿ, ಆಕ್ಸಿಜನ್ ಕೊರತೆಗೆ ನ್ಯಾಯಾಲಯಗಳು ಛೀಮಾರಿ ಹಾಕಿದ್ದು, ಸರಕಾರಗಳು ಏನು ಮಾಡುತ್ತೀವೆ? ಆಕ್ಸಿಜನ್ ಪೂರೈಕೆ ಮಾಡುವುದು ಸರಕಾರದ ಜವಾಬ್ದಾರಿ ಎಂದಿತ್ತು.