ಒಂದೂವರೆ ವರ್ಷದಲ್ಲಿ 10 ಲಕ್ಷ ಹುದ್ದೆ ಭರ್ತಿಗೆ ಪ್ರಧಾನಿ ಮೋದಿ ಸೂಚನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ನಿರ್ದೇಶನದಂತೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ಉದ್ಯೋಗಿಗಳನ್ನು ಭರ್ತಿ ಮಾಡಲು ಕ್ರಮಗಳನ್ನು ಆರಂಭಿಸಲಾಗಿದೆ ಎಂದು ಪ್ರಧಾನಮಂತ್ರಿ ಕಚೇರಿ ತಿಳಿಸಿದೆ.


ಎಲ್ಲಾ ಸರ್ಕಾರಿ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲ ಅಗತ್ಯತೆ ಕುರಿತು ಸಂವಾದ ನಡೆಸಿದ ಪ್ರಧಾನಿ ಮೋದಿ ಮುಂದಿನ ಒಂದೂವರೆ ವರ್ಷದಲ್ಲಿ ಕನಿಷ್ಠ 10 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಗೃಹ ಸಚಿವಾಲಯ ಎಲ್ಲಾ ಸರ್ಕಾರಿ ಇಲಾಖೆ, ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲದ ಪರಿಶೀಲನೆ ನಡೆಸಿದೆ. ಮಿಷನ್ ಮೋಡ್ ಅಡಿಯಲ್ಲಿ ಹುದ್ದೆ ಭರ್ತಿಗೆ ಕ್ರಮಗಳನ್ನು ಶುರು ಮಾಡಿದೆ. ಇದನ್ನೂ ಓದಿ : – ಲಿವ್-ಇನ್ ಸಂಬಂಧದಲ್ಲಿ ಜನಿಸಿದ ಮಗು ಆಸ್ತಿಗೆ ಅರ್ಹ- ಸುಪ್ರೀಂಕೋರ್ಟ್ ಮಹತ್ವದ ತೀರ್ಪು

2014 ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ 2 ಕೋಟಿ ಉದ್ಯೋಗ ಸೃಷ್ಟಿ ಭರವಸೆ ನೀಡಿತ್ತು. ಆದರೆ, ಭರವಸೆಯಂತೆ ಹುದ್ದೆ ಭರ್ತಿ ಕಾರ್ಯ ನಡೆಯದ ಕಾರಣ ದೇಶಾದ್ಯಂತ ಭಾರಿ ಟೀಕೆಗೆ ಸರ್ಕಾರ ಗುರಿಯಾಗಿತ್ತು. ಇದೀಗ ಸರ್ಕಾರದ ಈ ನಿರ್ಧಾರ ನಿರುದ್ಯೋಗಿಗಳಲ್ಲಿ ಆಶಾಕಿರಣ ಮೂಡಿಸಿದೆ.

ಇದನ್ನೂ ಓದಿ : – ಯೋಗಿ ಸರ್ಕಾರದ ಬುಲ್ಡೋಜರ್ ಕಾರ್ಯಾಚರಣೆ ಕಾನೂನು ಬಾಹಿರ – ಸುಪ್ರೀಂ ಕೋರ್ಟ್ ಗೆ ಅರ್ಜಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!