ಪ್ರಧಾನಿ ನರೇಂದ್ರ ಮೋದಿ ಅವರ ಕಣ್ಣೀರಿನಿಂದ ದೇಶದ ಜನರನ್ನು ಕೋವಿಡ್ ಸಾವಿನಿಂದ ರಕ್ಷಿಸಲು ಸಾಧ್ಯವಿಲ್ಲ. ಬದಲಾಗಿ ಸಮರ್ಪಕ ಆಕ್ಸಿಜನ್ ಪೂರೈಕೆಯಿಂದ ಸಾಧ್ಯ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ದೆಹಲಿಯಿಂ ವೀಡಿಯೋ ಕಾನ್ಫರೆನ್ಸ್ ಮೂಲಕ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕೊರೊನಾ ಮೊದಲ ಮತ್ತು 2ನೇ ಅಲೆಯಿಂದ ದುರಂತ ಸಂಭವಿಸಿದೆ. ನಾವು ಸಾಕಷ್ಟು ಮುನ್ನೆಚ್ಚರಿಕೆ ನೀಡಿದರೂ ಕ್ರಮ ಕೈಗೊಳ್ಳಲಿಲ್ಲ. ಒಂದು ವೇಳೆ ಸೂಕ್ತ ಕ್ರಮ ಕೈಗೊಂಡಿದ್ದರಿಂದ ಶೇ.90ರಷ್ಟು ಜನರನ್ನು ಉಳಿಸಬಹುದಿತ್ತು ಎಂದರು.
ದೇಶದಲ್ಲಿ ಆಕ್ಸಿಜನ್ ಕೊರತೆ ಇಲ್ಲ. ಆದರೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ವಿಫಲವಾದ ಕೇಂದ್ರ ಸರಕಾರ ಜನರ ಸಾವಿಗೆ ಕಾರಣವಾಯಿತು. ಆದ್ದರಿಂದ ಕೇಂದ್ರ ಸರಕಾರ ಕೋವಿಡ್ ಸಾವು-ನೋವು ಕುರಿತು ಶ್ವೇತಪತ್ರ ಹೊರಡಿಸಬೇಕು ಆಗ್ರಹಿಸುತ್ತಿರುವುದಾಗಿ ಹೇಳಿದರು.
ಕೇಂದ್ರ ಸರಕಾರ ನೀಡುತ್ತಿರುವ ಕೋವಿಡ್ ಸಾವಿನ ಅಂಕಿ-ಅಂಶಗಳಿಗಿಂತ 5ರಿಂದ 6 ಪಟ್ಟು ಹೆಚ್ಚು ಸಾವು ಸಂಭವಿಸಿದೆ. ಆದರೆ ಸರಕಾರ ಜನರಿಗೆ ವಾಸ್ತವ ತಿಳಿಸದೇ ಮರೆಮಾಚಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.
ದೆಹಲಿಯಿಂ ವೀಡಿಯೋ ಕಾನ್ಫರೆನ್ಸ್ ಮೂಲಕ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ಕೋವಿಡ್ ಸಾವು-ನೋವು ಕುರಿತು ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ.
ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರಕಾರ ಸಮರ್ಪಕವಾಗಿ ಕ್ರಮ ಕೈಗೊಳ್ಳಲಿಲ್ಲ. ನಾವು ಈ ಸಂದರ್ಭದಲ್ಲಿ ಸರಕಾರದ ವಿರುದ್ಧ ಟೀಕೆ ಮಾಡುತ್ತಿಲ್ಲ. ಬದಲಾಗಿ ಮೂರನೇ ಅಲೆಯ ಬಗ್ಗೆ ಈಗಲೇ ಸಿದ್ಧತೆ ಮಾಡಿಕೊಳ್ಳಲು ಸಲಹೆ ನೀಡುತ್ತಿದ್ದೇವೆ. ಮೂರನೇ ಅಲೆಯ ಬಗ್ಗೆ ಇಡೀ ವಿಶ್ವಕ್ಕೆ ಗೊತ್ತಿದ್ದು, ಎಚ್ಚೆತ್ತುಕೊಳ್ಳದಿದ್ದರೆ ಅನಾಹುತ ತಪ್ಪಿದ್ದಲ್ಲ ಎಂದು ರಾಹುಲ್ ಗಾಂಧಿ ಎಚ್ಚರಿಸಿದರು.