ಬೆಂಗಳೂರು: ಕನ್ನಡದ ಬಹು ನಿರೀಕ್ಷೆಯ ಪೊಗರು ಚಿತ್ರದ ಸಾಂಗ್ ಇಂದು ತಮಿಳಿನಲ್ಲಿ ಬಿಡುಗಡೆಯಾಗುತ್ತಿದ್ದು, ಅಲ್ಲಿನ ಚಿತ್ರಪ್ರೇಮಿಗಳ ಎದೆಯಲ್ಲಿ ಸದ್ದು ಮಾಡಲಿದೆ.
ನಂದಕಿಶೋರ್ ನಿರ್ದೇಶನದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷೆಯ ‘ಪೊಗರು’ ಚಿತ್ರದ ಖರಾಬು ಹಾಡು ಕನ್ನಡದಲ್ಲಿ ಈಗಾಗಲೇ 200ಮಿಲಿಯನ್ ವೀಕ್ಷಣೆ ಪಡೆಯುವ ಮೂಲಕ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ.
ಪೊಗರು ಸಿನಿಮಾ ತಮಿಳಿನಲ್ಲೂ ರಿಲೀಸ್ ಆಗುತ್ತಿದ್ದು, ಈ ಚಿತ್ರದ ಖರಾಬು ಹಾಡನ್ನು ತಮಿಳಿನಲ್ಲಿ ಇಂದು 12:12ಕ್ಕೆ ಬಿಡುಗಡೆ ಮಾಡುತ್ತಿದ್ದಾರೆ. ಪೊಗರು ಸಿನಿಮಾ ಕನ್ನಡ ಸೇರಿದಂತೆ ತೆಲುಗು ಹಾಗೂ ತಮಿಳು ಭಾಷೆಯಲ್ಲಿ ರಿಲೀಸ್ ಆಗಲಿದೆ. ಬಿ ಕೆ ಗಂಗಾಧರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅಭಿನಯಿಸಿದ್ದಾರೆ ಇದೇ ತಿಂಗಳು ಫೆ. 19ರಂದು ಈ ಸಿನಿಮಾ ತೆರೆ ಮೇಲೆ ಬರಲಿದೆ.