ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗಿರಿನಗರ ಪೊಲೀಸ್ ಠಾಣೆಯ ಸೈಬರ್ ಕ್ರೈಂ ವಿಭಾಗದಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ಸದಾಶಿವ (47) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿನ್ನೆ ಸಂಜೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕುಟುಂಬಸ್ಥರು ಬೆಳಿಗ್ಗೆ 5,30ರ ಸುಮಾರಿಗೆ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಭಾರತೀಯ ಸೇನೆಯಲ್ಲಿ 17 ವರ್ಷ ಸೇವೆ ಸಲ್ಲಿಸಿದ್ದ ಸದಾಶಿವ ಸೇನೆಯಲ್ಲಿ ನಿವೃತ್ತಿ ಆದ ನಂತರ ಪೊಲೀಸ್ ಇಲಾಖೆಗೆ ಸೇರಿದ್ದರು. ವಿಜಯನಗರ ಠಾಣೆಯಲ್ಲಿ 8 ವರ್ಷ ಕೆಲಸ ಮಾಡಿದ್ದರು. ಬಳಿಕ ಸಿಸಿಬಿ ಸೈಬರ್ ಕ್ರೈಂನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.