ಗಡಿ ಜಿಲ್ಲೆ ಬೆಳಗಾವಿ (Belagam) ಬಿಜೆಪಿ ನಾಯಕರ ಮಧ್ಯೆ ಸಂಘರ್ಷ ತಾರಕಕ್ಕೇರುತ್ತಿದೆ. ಚುನಾವಣೆಗೆ ಒಂದು ವರ್ಷ ಬಾಕಿ ಉಳಿದಿದ್ದು ಕಮಲ ನಾಯಕರ ಈ ಕಲಹ ಬಿಜೆಪಿ ಹೈಕಮಾಂಡ್‌ಗೆ ತಲೆನೋವಾಗಿದೆ. ಕತ್ತಿ-ಸವದಿ ಹಾಗೂ ಜಾರಕಿಹೊಳಿ ಬ್ರದರ್ಸ್ ಮಧ್ಯೆದ ವೈಮನಸ್ಸು ದಿನ ಕಳೆದಂತೆ ಬಿಗಡಾಯಿಸುತ್ತಿದೆ. ಭಿನ್ನಮತ ಶಮನಕ್ಕೆ ಸ್ವತಃ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (B.S yadiyrappa) ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಳಗಾವಿಗೆ ಆಗಮಿಸಲಿದ್ದಾರೆ. ಇದನ್ನುಓದಿ – ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ನಾನು ಕಾರಣ ಅಲ್ಲ- ನಾನ್ಯಾಕೆ ರಾಜೀನಾಮೆ ಕೊಡಲಿ: ಕೆ ಎಸ್ ಈಶ್ವರಪ್ಪ
ಜಿಲ್ಲೆಯಲ್ಲಿ ಬಿಜೆಪಿ ನಾಯಕರು ಎರಡು ದಿನ ಪ್ರವಾಸ ಕೈಗೊಂಡಿದ್ದು ಯಡಿಯೂರಪ್ಪ ಹಾಗೂ ಅರುಣ್ ಸಿಂಗ್ (Arunsingh), ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ (C.T.Ravi) ನಾಳೆ ಬೆಳಗಾವಿ ಪ್ರವಾಸ ಕೈಗೊಂಡಿದ್ದಾರೆ. ನಗರದ ಖಾಸಗಿ ಹೋಟೆಲ್ನಯಲ್ಲಿ ಎರಡು ದಿನ ಸಂಘಟನಾತ್ಮಕ ಕಾರ್ಯಕ್ರಮಗಳ ಆಯೋಜನೆ ಮಾಡಲಿದ್ದು, ಬೆಳಗಾವಿ ಜಿಲ್ಲೆ, ಬೆಳಗಾವಿ ಗ್ರಾಮೀಣ, ಚಿಕ್ಕೋಡಿ ನಗರದ ನಾಯಕರು ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಸಂಸದರು, ಶಾಸಕರು, ಮಾಜಿ ಶಾಸಕರು ಹಾಗೂ ಪಕ್ಷದ ಮುಖಂಡರು ಭಾಗಿಯಾಗಲಿದ್ದಾರೆ.ಇದನ್ನುಓದಿ – ಈಶ್ವರಪ್ಪ ಹೆಸರು ಬರೆದಿಟ್ಟು ಉಡುಪಿಯಲ್ಲಿ ಗುತ್ತಿಗೆದಾರ ಆತ್ಮಹತ್ಯೆ
ಈ ವೇಳೆ ಜಿಲ್ಲೆಯ ಬಣ ರಾಜಕೀಯದ ಬಗ್ಗೆ ಎರಡು ದಿನ ಸಭೆಯಲ್ಲಿ ಚರ್ಚೆ ಆಗುವ ಸಾಧ್ಯತೆ ಇದೆ. ಬೆಳಗಾವಿಯಲ್ಲಿ ಪರಿಷತ್ ಚುನಾವಣೆ ಸೋಲಿನ ಬಳಿಕ ಬಣ ರಾಜಕೀಯ ಹೆಚ್ಚಾಗಿದೆ. ಸದ್ಯ ಜಿಲ್ಲೆಯಲ್ಲಿ ಕತ್ತಿ, ಜಾರಕಿಹೊಳಿ ಬಣಗಳ ನಡುವೆ ತಿಕ್ಕಾಟ ಇದೆ. ಇದನ್ನು ಪರಿಹರಿಸಲು ಪ್ರಯತ್ನ ನಡೆದಿದೆ. ಕಳೆದ ಹಲವು ದಿನಗಳ ಹಿಂದೆ ಜಾರಕಿಹೊಳಿ ಸಹೋದರನ್ನು ಹೊರಗಿಟ್ಟು ಸಚಿವ ಉಮೇಶ್ ಕತ್ತಿ ನೇತೃತ್ವದ ಬಣದ ಲಕ್ಷಣ್ ಸವದಿ, ಶಶಿಕಲಾ ಜೊಲ್ಲೆ, ಮಹಾಂತೇಶ್ ಕವಟಗಿಮಠ ಒಂದಾಗಿ ಮಹತ್ವದ ಸಭೆ ನಡೆಸುವ ಮೂಲಕ ಜಾರಕಿಹೊಳಿ ಬಣದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಆದರೆ ಇದ್ಯಾವುದಕ್ಕೂ ತೆಲೆಕೆಡಿಸಿಕೊಳ್ಳದ ರಮೇಶ್ ಜಾರಕಿಹೊಳಿ, ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ಪಡೆಯಲು ತೀವ್ರ ಕಸರತ್ತು ಮಾಡುತ್ತಿದ್ದಾರೆ.
ಬೆಳಗಾವಿಯಲ್ಲಿ ಗುಂಪುಗಾರಿಕೆ ಗಂಭೀರವಾಗಿರುವ ಹಿನ್ನೆಲೆಯಲ್ಲಿ, ಸಮಸ್ಯೆ ಉಲ್ಬಣಗೊಳ್ಳುವ ಮುನ್ನವೇ ಸಮಸ್ಯೆ ಬಗೆಹರಿಸಲು ಯಡಿಯೂರಪ್ಪ ಧಾವಿಸಿದ್ದಾರೆ.