ಕನ್ನಡದ ಬಹಭಾಷಾ ನಟ ಪ್ರಕಾಶ್ ರೈ ಅವರಿಗೆ ಶೂಟಿಂಗ್ ವೇಳೆ ಬಲಗೈಗೆ ಬಲವಾದ ಪೆಟ್ಟು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಜನಿಕಾಂತ್ ಅಳಿಯ ಧನುಷ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿರುವ ತಮಿಳು ಚಿತ್ರದ ಚಿತ್ರೀಕರಣ ಚೆನ್ನೈನಲ್ಲಿ ನಡೆಯುತ್ತಿದ್ದ ವೇಳೆ ಪ್ರಕಾಶ್ ರೈ ಅವರಿಗೆ ಗಾಯವಾಗಿದ್ದರು.
ಸಾಹಸ ಚಿತ್ರದ ಚಿತ್ರೀಕರಣದ ವೇಳೆ ಪ್ರಕಾಶ್ ರೈ ಅವರ ಕೈಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವೇಳೆ ಅಭಿಮಾನಿಗಳು ಆತಂಕಗೊಳ್ಳುವ ಅಗತ್ಯವಿಲ್ಲ. ನಾನು ಚೇತರಿಸಿಕೊಳ್ಳುತ್ತಿದ್ದೇನೆ ಎಂದು ಪ್ರಕಾಶ್ ರೈ ಟ್ವಿಟ್ ಮಾಡಿದ್ದಾರೆ.