2024ರ ಚುನಾವಣಾ ತಂತ್ರಗಾರಿಕೆ ಹೆಣೆಯಲು ಮೂವರು ಗಾಂಧಿಗಳನ್ನು ಚುನಾವಣಾ ತಂತ್ರಗಾರಿಕೆ ತಜ್ಞ ಪ್ರಶಾಂತ್ ಕಿಶೋರ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಮಂಗಳವಾರ ರಾತ್ರಿ ಕಾಂಗ್ರೆಸ್ ಸಂಸದರ ಭವನದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ವಾದ್ರಾ ಅವರನ್ನು ಪ್ರಶಾಂತ್ ಕಿಶೋರ್ ಭೇಟಿ ಮಾಡಿದರು.
ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಜೊತೆ ಕೈ ಜೋಡಿಸಿರುವ ಪ್ರಶಾಂತ್ ಕಿಶೋರ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಂತ್ರಗಾರಿಕೆ ರೂಪಿಸುವ ಹೊಣೆ ಹೊತ್ತಿದ್ದರು. ಈ ಬಗ್ಗೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ ಎನ್ನಲಾಗಿತ್ತು.
ಆದರೆ ಇದೀಗ ಮೂವರು ಗಾಂಧಿಯರನ್ನು ಭೇಟಿ ಮಾತುಕತೆ ನಡೆಸಿರುವುದು ಇದು ಕೇವಲ ವಿಧಾನಸಭಾ ಚುನಾವಣಾ ತಂತ್ರರಿಕೆ ಮಾತ್ರವಲ್ಲ, ಅದಕ್ಕಿಂತ ದೊಡ್ಡದು ಅಂದರೆ 2024ರ ಲೋಕಸಭಾ ಚುನಾವಣೆಗೆ ಸಿದ್ಧತೆ ಎಂದು ಹೇಳಲಾಗಿದೆ.