ಐಪಿಎಲ್ ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಕರ್ನಾಟಕದ ಯುವ ವೇಗಿ ಪ್ರಸಿದ್ಧ ಕೃಷ್ಣಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಮತ್ತು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಮೀಸಲು ಆಟಗಾರನಾಗಿ ಆಯ್ಕೆಯಾದ ಮರು ದಿನವೇ ಪ್ರಸಿದ್ಧ ಕೃಷ್ಣಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಕೊರೊನಾ ಸೋಂಕು ಕಾಣಿಸಿಕೊಂಡ ಕೆಕೆಆರ್ ತಂಡದ ನಾಲ್ಕನೇ ಆಟಗಾರ ಪ್ರಸಿದ್ಧ ಕೃಷ್ಣ ಆಗಿದ್ದಾರೆ. ಬಬಲ್ ಪ್ರೊಟೆಕ್ಷನ್ ಮೀರಿ ಕೊರೊನಾ ಸೋಂಕು ಐಪಿಎಲ್ ಆಟಗಾರರರಲ್ಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಐಪಿಎಲ್ ಟೂರ್ನಿಯನ್ನು ಮೊಟಕುಗೊಳಿಸಲಾಗಿದೆ.