ಇಸ್ಕಾನ್ ಸಂಸ್ಛೆ ನಿರ್ಮಿಸಿರುವ ರಾಜಾಧಿರಾಜ ಗೋವಿಂದ ದೇವಾಲಯವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಲೋಕಾರ್ಪಣೆಗೊಳಿಸಿದ್ರು. ಕನಕಪುರ ರಸ್ತೆಯ ವಸಂತಪುರದ ವಿಶಾಲ ಜಾಗದಲ್ಲಿ ಈ ನೂತನ ದೇವಾಲಯ ನಿರ್ಮಿಸಲಾಗಿದ್ದು, ದೇವಾಲಯಕ್ಕೆ ಮಂಗಳವಾರ ಬೆಳಿಗ್ಗೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್ ಅವರು ಪತ್ನಿ ಸವಿತಾ ಸಮೇತ ದೇವರ ದರ್ಶನ ಪಡೆದರು. ಈ ವೇಳೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗಿದ್ದರು.
ದೇವರ ದರ್ಶನ ನಂತರ, ದೇವಾಲಯ ಆವರಣದ ವೇದಿಕೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ತಿರುಮಲ ಮಾದರಿಯಲ್ಲಿ ಈ ದೇವಾಲಯ ನಿರ್ಮಿಸಲಾಗಿದ್ದು, ಮುಂದಿನ 48 ದಿನಗಳಲ್ಲಿ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ. ಆಗಸ್ಟ್ 1ರ ನಂತರ ಸಾರ್ವಜನಿಕರ ಪ್ರವೇಶಕ್ಕೆ ದೇವಾಲಯ ಮುಕ್ತವಾಗಲಿದೆ’ ಎಂದು ಇಸ್ಕಾನ್ ಬೆಂಗಳೂರು ಅಧ್ಯಕ್ಷ ಮಧು ಪಂಡಿತ್ ದಾಸ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : – 777 ಚಾರ್ಲಿ ಸಿನಿಮಾ ನೋಡಿ ಕಣ್ಣೀರು ಸುರಿಸಿದ ಸಿಎಂ ಬಸವರಾಜ ಬೊಮ್ಮಾಯಿ