ಮುಂದಿನ ತಿಂಗಳು ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ(NDA) ಅಭ್ಯರ್ಥಿಯಾಗಿ ಒಡಿಶಾ ಮೂಲದ ದ್ರೌಪದಿ ಮುರ್ಮು (Draupadi Murmu) ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ದೆಹಲಿಯಲ್ಲಿ ಬಿಜೆಪಿ (BJP) ಮುಖಂಡರ ಸಮ್ಮುಖದಲ್ಲಿ ಚುನಾವಣಾಧಿಕಾರಿಗಳ ಮುಂದೆ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎನ್ ಡಿ ಮೈತ್ರಿಕೂಟದ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರು ನಿನ್ನೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (NARENDRA MODI) ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ (AMITH SHA) ಅವರನ್ನು ಭೇಟಿ ಮಾಡಿದರು. ರಾಷ್ಟ್ರಪತಿ ಹುದ್ದೆಗೆ ದ್ರೌಪದಿ ಮುರ್ಮು ( Draupadi Murmu) ಅವರ ಉಮೇದುವಾರಿಕೆಯ ದೇಶಾದ್ಯಂತ ಜನರು ವಿವಿಧ ರೀತಿಯಲ್ಲಿ ಚರ್ಚೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : – RSS ಮುಖ್ಯಸ್ಥರನ್ನಾಗಿ ಬುಡಕಟ್ಟು ಮಹಿಳೆಯರನ್ನ ನೇಮಿಸಿ – ಸಿದ್ದರಾಮಯ್ಯ ಸವಾಲು