ತಾಯಿ ಹೀರಾಬೆನ್ ಆರೋಗ್ಯ ವಿಚಾರಿಸಲು ಅಹಮದಾಬಾದ್ ಆಸ್ಪತ್ರೆಗೆ ಆಗಮಿಸಿದ ಪ್ರಧಾನಿ ಮೋದಿ

ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಮ್ಮ ತಾಯಿ ಹೀರಾಬೆನ್ ಅವರ ಆರೋಗ್ಯ ವಿಚಾರಿಸಲು ಅಹಮದಾಬಾದ್ನ ಯುಎನ್ ಮೆಹ್ತಾ ಆಸ್ಪತ್ರೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ.

ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಮ್ಮ ತಾಯಿ ಹೀರಾಬೆನ್ (Heeraben) ಅವರ ಆರೋಗ್ಯ ವಿಚಾರಿಸಲು ಅಹಮದಾಬಾದ್ನ ಯುಎನ್ ಮೆಹ್ತಾ ಆಸ್ಪತ್ರೆಗೆ ಪ್ರಧಾನಿ ನರೇಂದ್ರ ಮೋದಿ (Narendra modi) ಆಗಮಿಸಿದ್ದಾರೆ. ಇಂದು ಬೆಳಗ್ಗೆ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಗುಜರಾತ್ (Gujrath) ನ ಅಹಮದಾಬಾದ್ನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೋದಿ ತಾಯಿಯ ಅನಾರೋಗ್ಯದ ಸುದ್ದಿ ತಿಳಿದ ತಕ್ಷಣ ಅಹಮದಾಬಾದ್ ಗೆ ಆಗಮಿಸಿ, ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ತಾಯಿಯ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಇನ್ನು ಮೋದಿ ಅವರ ತಾಯಿ ಆಸ್ಪತ್ರೆಗೆ ದಾಖಲಾದ ಸುದ್ದಿ ತಿಳಿದ ನಂತರ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಹಲವು ಸಚಿವರು, ಶಾಸಕರು ಯುಎನ್ ಮೆಹ್ತಾ ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ಬಗ್ಗೆ ವಿಚಾರಿಸುತ್ತಿದ್ದಾರೆ. ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ (Prahalad modi) ಮತ್ತು ಕುಟುಂಬದವರ ಕಾರು ಮೈಸೂರಿ (Mysuru) ನ ಕಡಕೊಳ ಬಳಿ ಮಂಗಳವಾರ ಅಪಘಾತಕ್ಕೀಡಾಗಿತ್ತು. ಅವರು ಸದ್ಯ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಮೋದಿಯವರ ತಾಯಿಯ ಆರೋಗ್ಯವೂ ಹದಗೆಟ್ಟಿದೆ.

ಇದನ್ನು ಓದಿ : –  ರಾಮನಗರದಲ್ಲಿ ಇವರ ಆಟ ನಡಿಯಲ್ಲ – ಅಶ್ವತ್ಥ್ ನಾರಾಯಣ್ ಗೆ ಹೆಚ್ಡಿಕೆ ತೀಕ್ಷ್ಣ ಪ್ರತಿಕ್ರಿಯೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!