ಬಿಲ್ ಪಾವತಿಸದೇ ಇದ್ದರೆ ಮೃತದೇಹ ಹಸ್ತಾಂತರಿಸದೇ ಕಳ್ಳಾಟ ಆಡುವ ಆಸ್ಪತ್ರೆಗಳಿಗೆ ಬೀಗ ಹಾಕಲು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಕೆಪಿಎಂಇ ಆ್ಯಕ್ಟ್ ಅಡಿ ಆಸ್ಪತ್ರೆ ಲೈಸನ್ಸ್ ರದ್ದು ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಬಿಲ್ ಬಾಕಿ ಪಾವತಿಸದೇ ಮೃತದೇಹ ತೆಗೆದುಕೊಂಡು ಹೋಗಲು ಕುಟುಂಬಸ್ಥರಿಗೆ ಆಸ್ಪತ್ರೆಗಳು ಸತಾಯಿಸುವಂತಿಲ್ಲ. ಒಂದು ವೇಳೆ ಖಾಸಗಿ ಆಸ್ಪತ್ರೆಗಳು ಈ ರೀತಿ ಶವ ನೀಡದೇ ಸತಾಯಿಸಿದ ದೂರು ಬಂದರೆ ಅಂತಹ ಆಸ್ಪತ್ರೆಗಳ ಲೈಸೆನ್ಸ್ ರದ್ದು ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸಂಬಂಧಿಕರ ಮೇಲೆ ಬಾಕಿ ವೆಚ್ಚ ಭರಿಸುವಂತೆ ಯಾವ ಆಸ್ಪತ್ರೆಗಳು ಒತ್ತಡ ಏರುವಂತಿಲ್ಲ. ಅಂತಹ ಪ್ರಕರಣಗಳು ಕಂಡು ಬಂದಲ್ಲಿ ಕೂಡಲೇ ಆಸ್ಪತ್ರೆ ಲೈಸೆನ್ಸ್ ರದ್ದುಪಡಿಸಲಾಗುವುದು ಎಂದು ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.