ಮುಂಬೈ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರಿಗೆ ಪ್ರತಿಷ್ಠಿತ ಬ್ರಿಟಿಷ್ ಅಕಾಡೆಮಿ ಫಿಲ್ಮ್ ಪ್ರಶಸ್ತಿ ಒಲಿದಿದೆ. ಇತ್ತೀಚಿಗೆ ಬಿಡುಗಡೆಯಾದ ‘ ದಿ ವೈಟ್ ಟೈಗರ್’ ಚಿತ್ರದಲ್ಲಿನ ನಟನೆಗಾಗಿ ಪ್ರಿಯಾಂಕಾ ಚೋಪ್ರಾ ಅವರಿಗೆ ಈ ಪ್ರಶಸ್ತಿ ಲಭಿಸಿದೆ.
ದಿ ವೈಟ್ ಟೈಗರ್ ಚಿತ್ರದ ಕಥೆಯನ್ನು ಅರವಿಂದ ಅಡಿಗ ಅವರ ದಿ ವೈಟ್ ಟೈಗರ್ ಪುಸ್ತಕದಿಂದ ಆರಿಸಿಕೊಳ್ಳಲಾಗಿದೆ. ಚಿತ್ರಕ್ಕೆ ರಮಿನ್ ಬಹ್ರಾನಿ ನಿರ್ದೇಶನವಿದ್ದು, ಪ್ರಿಯಾಂಕಾ ಚೋಪ್ರಾ, ರಾಜ್ ಕುಮಾರ್ ರಾವ್ ಸೇರಿದಂತೆ ಹಲವರು ನಟಿಸಿದ್ದಾರೆ. ಜ.22 ರಂದು ಈ ಚಿತ್ರ ನೆಟ್ ಫ್ಲಿಕ್ಸ್ ನಲ್ಲಿ ಬಿಡುಗಡೆಯಾಗಿತ್ತು. ವರ್ಣ ವಿಭಜನೆ ಮತ್ತು ಸಾಮಾಜಿಕ ವ್ಯವಸ್ಥೆಯ ಕರಾಳ ವಾಸ್ತವ ವಿಚಾರಗಳು ಚಿತ್ರದಲ್ಲಿವೆ. ಇನ್ನು, ಪ್ರಶಸ್ತಿ ಲಭಿಸಿದ್ದಕ್ಕೆ ಪ್ರಿಯಾಂಕಾ ಚೋಪ್ರಾ ಅವರಿಗೆ ಅಭಿಮಾನಿಗಳು ಶುಭ ಕೋರಿದ್ದಾರೆ.