ಸಬ್ ಇನ್ಸ್ಪೆಕ್ಟರ್ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಆಡಿಯೋ ಹಾಗೂ ಅದರ ನೈಜತೆ ಬಗ್ಗೆ ಸಾಕ್ಷ್ಯವನ್ನು ಸಲ್ಲಿಸುವಂತೆ ಸೂಚಿಸಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಪ್ರಿಯಾಂಕ ಖರ್ಗೆ(Priyank Kharge) ಗೆ ರಾಜ್ಯ ಅಪರಾಧ ತನಿಖಾ ದಳ (CID) ಮೂರನೇ ಬಾರಿಗೆ ಬುಧವಾರ ನೋಟಿಸ್ ಜಾರಿಗೊಳಿಸಿತ್ತು.
ನೋಟಿಸ್ ಸ್ವೀಕರಿಸಿದ 2 ದಿನದೊಳಗೆ ತನಿಖಾಧಿಕಾರಿ ಮುಂದೆ ಹಾಜರಾಗಿ ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಕುರಿತು ಹೇಳಿಕೆ ದಾಖಲಿಸುವಂತೆ ಪ್ರಿಯಾಂಕ ಖರ್ಗೆಗೆ ಡಿವೈಎಸ್ಪಿ ನರಸಿಂಹಮೂರ್ತಿ ಸೂಚಿಸಿದ್ದರು. ಕೆಲ ದಿನಗಳ ಹಿಂದೆ ಸಹ ಸಿಐಡಿ ನೋಟಿಸ್ ಜಾರಿಗೊಳಿಸಿದ್ದರೂ ವಿಚಾರಣೆಗೆ ಹಾಜರಾಗಲು ಖರ್ಗೆ ನಿರಾಕರಿಸಿದ್ದರು. ಇದನ್ನೂಓದಿ :- ದಯಾಮರಣ ಕೋರಿ ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ ಬಿಎಂಟಿಸಿ ಡ್ರೈವರ್
ಪ್ರಿಯಾಂಕ್ ಗೆ 3 ಬಾರಿ ನೊಟೀಸ್ ಕೊಟ್ಟಿದ್ದ ಸಿಐಡಿ. ಸಿಐಡಿ ನೋಟೀಸ್ ಗೆ ಪ್ರಿಯಾಂಕ್ ಖರ್ಗೆ ಉತ್ತರ ಕೊಟ್ಟಿದ್ದಾರೆ. ವಕೀಲರ ಜೊತೆ ಚರ್ಚಿಸಿ 6 ಪುಟಗಳ ಉತ್ತರವನ್ನು ಪ್ರಿಯಾಂಕ್ ಖರ್ಗೆ ಕೊಟ್ಟಿದ್ದಾರೆ.
ಇದನ್ನೂಓದಿ :- LPG ಸಿಲಿಂಡರ್ ಬೆಲೆ ಮತ್ತಷ್ಟು ದುಬಾರಿ – ನೂತನ ದರ ಇಂದಿನಿಂದ ಜಾರಿ