ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಕಚೇರಿಯಲ್ಲಿ ಪ್ರೊಬೆಷನರಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಾಲಿನಿ (24) ಕೊರೊನಾ ವೈರಸ್ನಿಂದ ನಿಧನ ಹೊಂದಿದ್ದಾರೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ವಿರುಪಾಕ್ಷಿ ಗ್ರಾಮದ ಶಾಮಿಲಿ ಅವರಿಗೆ ಕಳೆದ ಹತ್ತು ದಿನಗಳ ಹಿಂದೆ ಕೋವಿಡ್ ದೃಡಪಟ್ಟಿತ್ತು. 7 ತಿಂಗಳ ಗರ್ಭಿಣಿಯಾಗಿದ್ದ ಅವರು, ರಜೆ ತೆಗೆದುಕೊಂಡು ತಮ್ಮ ಊರು ಕೋಲಾರಕ್ಕೆ ಮರಳಿದ್ದರು. ಬಳಿಕ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಮೇ 2 ರಂದು ಕೋವಿಡ್ ಚಿಕಿತ್ಸೆಗಾಗಿ ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮುಂಜಾನೆ ನಿಧನರಾಗಿದ್ದಾರೆ.
ಈ ಕುರಿತು ತಮ್ಮ ಟ್ವೀಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಡಿಜಿಪಿ ಪ್ರವೀಣ್ ಸೂದ್ ಅವರು, ಪೊಲೀಸ್ ಕುಟುಂಬದಲ್ಲಿ ಕಿರಿಯ ಸದಸ್ಯರಾಗಿರುವ ಶಾಮಿಲಿ ಕೋವಿಡ್ ಗೆ ಬಲಿಯಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಎಲ್ಲರೂ ಕೋವಿಡ್ ನಿಯಮ ಪಾಲಿಸಿ ಪೊಲೀಸರೊಂದಿಗೆ ಸಹಕರಿಸಿ, ಸುರಕ್ಷಿತವಾಗಿರಿ ಎಂದು ಈ ವೇಳೆ ಮನವಿ ಮಾಡಿದ್ದಾರೆ.