ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡದ ಖ್ಯಾತ ನಿಘಂಟು ತಜ್ಞ, ಶತಾಯುಷಿ ಪ್ರೊ.ಜಿ. ವೆಂಕಟಸುಬ್ಬಯ್ಯ ಸೋಮವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 108 ವರ್ಷ ವಯಸ್ಸಾಗಿತ್ತು.
ಕಳೆದ ಕೆಲವು ಸಮಯದಿಂದ ಬೆಂಗಳೂರಿನ ಜಯನಗರ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಸೋಮವಾರ ಮುಂಜಾನೆ 1.15ರ ಸುಮಾರಿಗೆ ನಿಧನರಾಗಿದ್ದಾರೆ.
ಪದ್ಮಶ್ರೀ ಪುರಸ್ಕೃತರಾಗಿದ್ದ ಪ್ರೊ.ಜಿ. ವೆಂಕಟಸುಬ್ಬಯ್ಯ, ನಿಘಂಟು ಶಾಸ್ತ್ರ, ಪ್ರಾಚೀನ ಸಾಹಿತ್ಯ ಅಧ್ಯಯನ, ಅನುವಾದ ಕ್ಷೇತ್ರಗಳಲ್ಲಿ ಅಪಾರ ಸಾಧನೆ ಮೆರೆದಿದ್ದಾರೆ. ಇಗೋ ಕನ್ನಡ ಎಂಬ ಅಂಕಣದ ಮೂಲಕ ಕನ್ನಡಿಗರ ಮನಸ್ಸು ಗೆದ್ದಿದ್ದ ಅವರು, 77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.
ಪದ್ಮಶ್ರೀ, ಪಂಪ, ನಾಡೋಜ, ಭಾಷಾಸಮ್ಮಾನ್ ಸೇರಿದಂತೆ ಹಲವು ಪ್ರಶಸ್ತಿಗಳನ್ನ ಜೀವಿ ಮುಡಿಗೇರಿಸಿಕೊಂಡಿದ್ದಾರೆ.