ರಾಜ್ಯದಲ್ಲಿ ಕೋವಿಡ್ ನಿಯಮ ಜಾರಿಯಲ್ಲಿದೆ. ಆದ್ದರಿಂದ ಪ್ರತಿಭಟನೆ ನಡೆಸುವಂತಿಲ್ಲ. ಪ್ರತಿಭಟನೆ ನಡೆಸಿದರೆ ಬಂಧಿಸುತ್ತೇವೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್ ಎಚ್ಚರಿಸಿದ್ದಾರೆ.
ರಾಜ್ಯ ರಸ್ತೆ ಸಾರಿಗೆ ನೌಕರರು ನಾಳೆಯಿಂದ ಕರೆ ನೀಡಿರುವ ಸಾರಿಗೆ ಸೇವೆ ಬಂದ್ ಪ್ರತಿಭಟನೆ ಹಿನ್ನೆಲೆಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಮಾಡಲಾಗಿದೆ. ಯಾರಾದ್ರೂ ಚೇಷ್ಟೆ ಮಾಡಿದರೆ ಅವರನ್ನ ಯಾವುದೇ ಕಾರಣಕ್ಕೂ ಬಿಡಲ್ಲ. ಕರ್ತವ್ಯಕ್ಕೆ ಹಾಜರಾಗುವವರಿಗೆ ಭದ್ರತೆ ಕೊಡುತ್ತೇವೆ. ಡ್ಯೂಟಿಗೆ ಬರೋದು ಬಿಡೊದು ಅವರ ಇಲಾಖೆಗೆ ಸಂಬಂಧಿಸಿದ್ದು ಎಂದು ಅವರು ಹೇಳಿದರು.
ರಸ್ತೆಗಿಳಿದು ಕಲ್ಲು ತೂರಾಟ ರಸ್ತೆ ತಡೆ ಮಾಡಿದರೆ ಅದಕ್ಕೆ ತಕ್ಕ ಶಾಸ್ತಿ ಮಾಡ್ತಿವಿ. 21ನೇ ತಾರೀಕಿನವರೆಗೆ ಕೋವಿಡ್ ಪ್ರೋಟೋಕಾಲ್ ಇದೆ. ಈಗಾಗಲೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತುಕತೆ ನಡೆದಿದೆ. ನಾಳೆ ಬಸ್ ಇಲ್ಲದಿದ್ದರೆ ಖಾಸಗಿಯವರು ಸಹಕಾರ ನೀಡಿದರೆ ಅವರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ತೀವಿ ಎಂದು ಕಮಲ್ ಪಂತ್ ಭರವಸೆ ನೀಡಿದರು.