ಬಿಜೆಪಿ ನಾಯಕಿ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ನೀಡಿದ್ದ ಹೇಳಿಕೆಯನ್ನು ವಿರೋಧಿಸಿ ರಾಂಚಿಯಲ್ಲಿ ಮುಸ್ಲಿಮರು ನಡೆಸಿದ ಪ್ರತಿಭಟನೆಯಲ್ಲಿ ಇಬ್ಬರು ಸಾವನ್ನಪ್ಪಿ ಹತ್ತು ಮಂದಿ ಗಾಯಗೊಂಡಿದ್ದಾರೆ. ಪೊಲೀಸರು ಮತ್ತು ಪ್ರತಿಭಟನಾನಿರತರ ನಡುವೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ಕರೆತರಲಾಯಿತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಸಾವನ್ನಪ್ಪಿದ್ದಾರೆ. ಹತ್ತು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ. ಈ ವೇಳೆ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಪ್ರತಿಭಟನಾಕಾರರು ಹಾಗೂ ಪೊಲೀಸರು ಇಬ್ಬರು ಗುಂಡು ಹಾರಿಸಿದರ ಪರಿಣಾಮ ಹಲವರು ಗಾಯಗೊಂಡಿದ್ದಾರೆ. ಇದೀಗ ಜಾರ್ಖಂಡ್ನ ರಾಜಧಾನಿಯ ಹಲವು ಭಾಗಗಳಲ್ಲಿ ಕಫ್ರ್ಯೂ ವಿಧಿಸಲಾಗಿದೆ. ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ವಿರುದ್ಧ ಹೇಳಿಕೆ ನೀಡಿ ಬಿರುಗಾಳಿ ಎಬ್ಬಿಸಿದ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಆಗ್ರಹಿಸಲಾಗಿದೆ.
ಇದನ್ನೂ ಓದಿ : – ಪ್ರವಾದಿ ವಿರುದ್ಧ ವಿವಾದಾತ್ಮಕ ಹೇಳಿಕೆ – ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ ದೇಶಾದ್ಯಂತ ಮುಸ್ಲಿಂ ಸಂಘಟನೆಗಳ ಪ್ರತಿಭಟನೆ – ಹಲವೆಡೆ ಹಿಂಸಾಚಾರ