ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಪಿಎಸ್ಐ ಪರೀಕ್ಷೆಯ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿಯ ಬಂಧನವಾಗಿದ್ದು,
ಅಕ್ರಮ ನಡೆದ ಜ್ಞಾನಜ್ಯೋತಿ ಶಾಲೆಯ ಮುಖ್ಯೋಪಾಧ್ಯಾಯ ಕಾಶಿನಾಥ್ ಇಂದು ಪೊಲೀಸರಿಗೆ ಶರಣಾಗಿದ್ದಾರೆ. ಕಳೆದ 22 ದಿನಗಳಿಂದ ತಲೆಮರೆಸಿಕೊಂಡಿದ್ದ ಕಾಶಿನಾಥ್, ಇಂದು ಬೆಳಿಗ್ಗೆ 8.30 ರ ಸುಮಾರಿಗೆ ಸಿಐಡಿ ತಂಡದ ಎದುರಿಗೆ ಶರಣಾಗಿದ್ದು,
ಆ ಮೂಲಕ ಶಾಲೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದ ಬಹುತೇಕರು ಈಗ ಬಂಧನವಾದಂತಾಗಿದೆ. ಈ ಮೂಲಕ ಈ ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 26ಕ್ಕೆ ಏರಿದಂತಾಗಿದೆ.
ಇದನ್ನೂ ಓದಿ :- ಪಿಎಸ್ಐ ಪರೀಕ್ಷಾ ಅಕ್ರಮ – ಪ್ರಭಾವಿ ಸಚಿವರ ಕೈವಾಡ ಎಂದ ಡಿಕೆಶಿ