ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಕೈ ಹಾಕಿದವರು ಇನ್ನೊಮ್ಮೆ ಹೀಗೆ ಮಾಡಲು ಆಗದಂತೆ ಮುಟ್ಟಿ ನೋಡಿಕೊಳ್ಳಬೇಕು ಹಾಗೆ ಮಾಡುತ್ತೇನೆ – ಆರಗ ಜ್ಞಾನೇಂದ್ರ

ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಕೈ ಹಾಕಿದವರು ಇನ್ನೊಮ್ಮೆ ಹೀಗೆ ಮಾಡಲು ಆಗದಂತೆ ಮುಟ್ಟಿ ನೋಡಿಕೊಳ್ಳಬೇಕು ಹಾಗೆ ಮಾಡುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್ ನವರು ಆರೋಪ ಮಾಡುತ್ತಿದ್ದಾರೆ.

ದಾಖಲಾತಿ ಕೇಳಿದರೆ ಓಡಿಹೋಗುತ್ತಾರೆ. ಪ್ರಿಯಾಂಕ್ ಖರ್ಗೆಗೆ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗಿಲ್ಲ, ತನಿಖೆಯ ದಿಕ್ಕೂ ತಪ್ಪಿಸುವುದೊಂದೇ ಇವರ ಉದ್ದೇಶ ಎಂದು ಕಿಡಿಕಾರಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಪಿಎಸ್ಐ ನೇಮಕಾತಿ ಅಕ್ರಮದಲ್ಲಿ 300 ಕೋಟಿ ಅಕ್ರಮ ನಡೆದಿದೆ ಎಂಬ ಸಿದ್ದರಾಮಯ್ಯ ಆರೋಪಕ್ಕೆ, ಸಿದ್ದರಾಮಯ್ಯ 300 ಕೋಟಿ ಅಲ್ಲ 3,000 ಕೋಟಿ ಆರೋಪ ಮಾಡಲಿ, ಮಾತನಾಡುವುದಕ್ಕೆ ಅವರಿಗೆ ವಾಕ್ ಸ್ವಾತಂತ್ರವಿದೆ ಎಂದು ತಿರುಗೇಟು ನೀಡಿದ್ದಾರೆ. ನಿರಾಧಾರವಾಗಿ ಆರೋಪ ಮಾಡುವುದು ದಾಖಲಾತಿ ಕೇಳಿದರೆ ಓಡಿಹೋಗುವುದು ಕಾಂಗ್ರೆಸ್ ಕೆಲಸವಾಗಿದೆ. ಇದನ್ನು ಓದಿ :- ರೇಪ್ ಬಗ್ಗೆ ವಿವಾದಾತ್ಮಕ ಹೇಳಿಕೆ – ಆಂಧ್ರ ಗೃಹ ಸಚಿವೆ ತನೇತಿ ವನಿತಾ ವಿರುದ್ಧ ಆಕ್ರೋಶ

ಪ್ರಕರಣದಲ್ಲಿ ಸಿಲುಕಿದವರು ಬಹುತೇಕ ಕಾಂಗ್ರೆಸ್ನವರು. ತನಿಖೆ ಸರಿಯಾಗಿ ನಡೆದರೆ ತಮ್ಮ ಬುಡಕ್ಕೆ ಬರುತ್ತದೆ ಎನ್ನುವುದು ಗೊತ್ತಾಗಿ ತನಿಖೆ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಅಂತ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಸದ್ಯ ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದೆ. ಅಕ್ರಮದಲ್ಲಿ ಕೈ ಹಾಕಿದವರು ಇನ್ನೊಮ್ಮೆ ಹೀಗೆ ಮಾಡಲು ಆಗದಂತೆ ಮುಟ್ಟಿ ನೋಡಿಕೊಳ್ಳಬೇಕು ಹಾಗೆ ಮಾಡುತ್ತೇನೆ ಎಂದಿದ್ದಾರೆ.

ಇದನ್ನು ಓದಿ :- ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ವರ್ಗಾವಣೆ, ನೂತನ ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ನೇಮಕ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!