ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ – ಶಾಸಕರ ಆಪ್ತ ಗಣಪತಿ ಭಟ್ ಶಿರಸಿಯಲ್ಲಿ ವಶಕ್ಕೆ

545 ಪಿಎಸ್ಐ (psi ) ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಹೇರೂರು ಗ್ರಾಮದ ನಿವಾಸಿ ಗಣಪತಿ ವಿ.ಭಟ್ ( ganapati bhat) ನನ್ನು ಸಿಐಡಿ (cid) ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಪೊಲೀಸ್ ಇಲಾಖೆಯ ಹಲವು ಅಧಿಕಾರಿಗಳ ಟ್ರಾನ್ಸ್ಫರ್ ಹಾಗೂ ಇತರ ಡೀಲಿಂಗ್ಗಳಲ್ಲಿ ಸಕ್ರಿಯನಾಗಿದ್ದ ಎಂಬ ಬಗ್ಗೆ ತಿಳಿದು ಬಂದಿದೆ. ಗಣಪತಿ ವಿ.ಭಟ್, ಶಾಸಕರಿಗೆ ಬಹಳ ಅತ್ಮೀಯನಾಗಿದ್ದ. ಅಕ್ರಮ ಚಟುವಟಿಕೆಯಿಂದ ಆಸ್ತಿ ಸಂಪಾದಿಸಿದ್ದ. ಇದನ್ನು ಓದಿ : –  ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹಿಸಿ ಹಾವೇರಿಯಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ನಿನ್ನೆ ಬೆಂಗಳೂರಿನಿಂದ ಸಿದ್ಧಾಪುರದ ಹೇರೂರಿಗೆ ಆಗಮಿಸಿದ್ದ ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಸಿಐಡಿ ಕಚೇರಿಯಲ್ಲಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಗಣಪತಿ ಭಟ್ ಗೃಹ ಮಂತ್ರಿ ಅರಗ ಜ್ಞಾನೇಂದ್ರ ಅತ್ಯಾಪ್ತ ಎನ್ನಲಾಗಿದೆ.

ಇದನ್ನು ಓದಿ : –  ಮಡಿಕೇರಿಯಲ್ಲಿ ಮಳೆಪೀಡಿತ ಪ್ರದೇಶಗಳಿಗೆ ಸಿಎಂ ಬೊಮ್ಮಾಯಿ ಭೇಟಿ- ಪರಿಹಾರ ಚೆಕ್ ವಿತರಣೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!