ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ – ಶೀಘ್ರವೇ ಮರು ಪರೀಕ್ಷೆ ಎಂದ ಅರಗ ಜ್ಞಾನೇಂದ್ರ

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಮರು ಪರೀಕ್ಷೆ ನಡೆಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಣಕ್ಕಾಗಿ ಹುದ್ದೆಗಳು ಎನ್ನುವುದನ್ನು ಬಿಡಬೇಕು.ಓದಿ :- ಪಿಎಸ್ ಐ ಪರೀಕ್ಷೆ ಅಕ್ರಮ ಪ್ರಕರಣ – ಪತ್ರದ ಮೂಲಕ ಸಿಐಡಿ ತರಾಟೆಗೆ ತೆಗೆದುಕೊಂಡ ಪ್ರಿಯಾಂಕ್ ಖರ್ಗೆ

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಮರು ಪರೀಕ್ಷೆ ನಡೆಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಣಕ್ಕಾಗಿ ಹುದ್ದೆಗಳು ಎನ್ನುವುದನ್ನು ಬಿಡಬೇಕು. ಅನೇಕ ಪರೀಕ್ಷೆಗಳಲ್ಲಿ ಇಂತಹ ಅಕ್ರಮಗಳು ನಡೆದಿವೆ. ಪಿಎಸ್ಐ ಪರೀಕ್ಷೆಗೆ ಕಷ್ಟ ಪಟ್ಟು ಓದಿದವರಿಗೆ ಅನ್ಯಾಯವಾಗಲಿದೆ, ಈ ಭಾರಿ ಸೆಲೆಕ್ಟ್ ಆಗಿರುವವರಿಗೆ ಅನ್ಯಾಯ ಆಗುತ್ತದೆ

ಹಾಗಾಗಿ ಮರು ಪರೀಕ್ಷೆಯನ್ನು ನಡೆಸಲಾಗುತ್ತೆ. ಆದಷ್ಟು ಶೀಘ್ರದಲ್ಲೇ ಪರೀಕ್ಷೆಯನ್ನು ನಡೆಸಲಾಗುವುದು ಎಂದು ತಿಳಿಸಿದರು. ಈ ನಿಟ್ಟಿನಲ್ಲಿ ಅಕ್ರಮ ತಡೆಗಟ್ಟಲು ಸರ್ಕಾರ ಇನ್ನಷ್ಟು ಕಠಿಣ ನಿಯಮ ತರಬೇಕಿದೆ ಎಂದರು. ಕಠಿಣ ಪರಿಶ್ರಮ ಮಾಡಿದವರಿಗೆ ಅವಕಾಶಗಳು ಕೈ ತಪ್ಪುತ್ತಿವೆ. ಪರೀಕ್ಷೆಯಲ್ಲಿ ಅಕ್ರಮ ಎಸಗಿದವರು ಸೆಲೆಕ್ಟ್ ಆಗುತ್ತಿದ್ದಾರೆ. ಇದಕ್ಕೆ ಬ್ರೇಕ್ ಹಾಕಲು ಕಠಿಣ ನಿಯಮವನ್ನು ಜಾರಿಗೆ ತರಬೇಕಿದೆ ಎಂದು ತಿಳಿಸಿದ್ರು .ಓದಿ :- ಪಿಎಸ್ ಐ ಪರೀಕ್ಷೆ ಅಕ್ರಮ ಪ್ರಕರಣ – ಪತ್ರದ ಮೂಲಕ ಸಿಐಡಿ ತರಾಟೆಗೆ ತೆಗೆದುಕೊಂಡ ಪ್ರಿಯಾಂಕ್ ಖರ್ಗೆ

ಇದೇ ಸಂದರ್ಭದಲ್ಲಿ ಹಗರಣದ ಕಿಂಗ್ ಪಿನ್ ದಿವ್ಯಾ ಹಾಗರಗಿ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿ “ ಪಿಎಸ್ ಐ ನೇಮಕಾತಿ ಅಕ್ರಮ ವಿಚಾರವಾಗಿ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಂಧಿಸಲಾಗಿದೆ. ಅರ್ಚನಾ, ದಿವ್ಯಾ ಹಾಗರಗಿ, ಹಾಗೂ ಆಕೆಯ ಕಾರು ಚಾಲಕ ಸದ್ದಾಂ ಮತ್ತು ಸುನಂದಾ ಎಂಬುವವರನ್ನು ಬಂಧನ ಮಾಡಲಾಗಿದೆ.
ಪುಣೆಯಲ್ಲಿ ಇವರೆಲ್ಲರನ್ನು ವಶಕ್ಕೆ ಪಡೆಯಲಾಗಿದ್ದು, ಇದೀಗ ಆರೋಪಿಗಳನ್ನು ರಾಜ್ಯಕ್ಕೆ ಕರೆ ತರಲಾಗುತ್ತಿದೆ. ಒಂದಕ್ಕಿಂತ ಹೆಚ್ಚು ಸೆಂಟರ್ ನಲ್ಲಿ ಅವ್ಯವಹಾರ ನಡೆದಿರುವುದು ಮನದಟ್ಟಾಗಿದೆ. ಬೆಂಗಳೂರಿನ ಸೆಂಟರ್ ನಲ್ಲೂ ಅಕ್ರಮ ನಡೆದಿದೆ. ಈ ಕಾರಣಕ್ಕಾಗಿ ಸರ್ಕಾರ ಇಡೀ ಪರೀಕ್ಷೆಯನ್ನು ರದ್ಧುಪಡಿಸಿದೆ ಎಂದು ತಿಳಿಸಿದರು.ಇದನ್ನೂ ಓದಿ :- ಪಿಎಸ್ ಐ ಪರೀಕ್ಷೆ ಅಕ್ರಮ ಪ್ರಕರಣ – ಪತ್ರದ ಮೂಲಕ ಸಿಐಡಿ ತರಾಟೆಗೆ ತೆಗೆದುಕೊಂಡ ಪ್ರಿಯಾಂಕ್ ಖರ್ಗೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!