ಪ್ರಿಯಾಂಕ್ ಖರ್ಗೆಗೆ ಸಿಐಡಿಯಿಂದ ಮೂರನೇ ನೋಟಿಸ್ ಜಾರಿ 545 ಪೊಲೀಸ್ ಸಬ್ಇನ್ಸ್ಪೆಕ್ಟರ್ಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಕೆಪಿಸಿಸಿ ವಕ್ತಾರ ಹಾಗೂ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಮೂರನೇ ಬಾರಿಗೆ ನೋಟಿಸ್ ಜಾರಿ ಮಾಡಿದೆ.
ಈ ನೋಟಿಸ್ ಸ್ವೀಕರಿಸಿದ ಎರಡು ದಿನದೊಳಗೆ ತನಿಖಾಧಿಕಾರಿ ಮುಂದೆ ಹಾಜರಾಗಿ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಕುರಿತು ಹೇಳಿಕೆ ದಾಖಲಿಸುವಂತೆ ಪ್ರಿಯಾಂಕ ಖರ್ಗೆ ಅವರಿಗೆ ಡಿವೈಎಸ್ಪಿ ನರಸಿಂಹಮೂರ್ತಿ ಸೂಚಿಸಿದ್ದಾರೆ.
ಈ ಹಿಂದೆ ಕೂಡ ಎರಡು ಬಾರಿ ಸಿಐಡಿ ಪ್ರಿಯಾಂಕ್ ಖರ್ಗೆಯವರಿಗೆ ನೋಟಿಸ್ ಜಾರಿಗೊಳಿಸಿತ್ತು. ನೋಟಿಸ್ ಸ್ವೀಕರಿಸಿದ್ದರೂ ವಿಚಾರಣೆಗೆ ಹಾಜರಾಗಲು ಖರ್ಗೆ ನಿರಾಕರಿಸಿದ್ದರು. ಈ ನಡುವೆ ಪ್ರಿಯಾಂಕ್ ಖರ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿ ಚರ್ಚಿಸಿದ್ದಾರೆ. ಇದನ್ನು ಓದಿ :- ಪಿಎಸ್ಐ ಪರೀಕ್ಷೆ ಅಕ್ರಮವನ್ನು ಪೊಲೀಸರೇ ಹೊರತಂದಿದ್ದಾರೆ – ಹೆಚ್.ಡಿ ಕುಮಾರಸ್ವಾಮಿ