ಅಕ್ರಮಕ್ಕೆ ಸಾಥ್ ನೀಡಿರುವ ಆರೋಪದಡಿ ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿಯನ್ನು ಶುಕ್ರವಾರ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಸಿಐಡಿ ಅಧಿಕಾರಿಗಳು ಬಂದಿದ್ದಾರೆ ಅನ್ನೋ ಮಾಹಿತಿ ಸಿಗುತ್ತಿದ್ದಂತೆ ಸಿಟ್ಟುಗೊಂಡ ದಿವ್ಯಾ ಹಾಗರಗಿ ಪುಣೆಯ ಮನೆಯಲ್ಲೇ ತನ್ನ ಬಳಿಯಿದ್ದ ಮೊಬೈಲ್ ಒಡೆದು ಹಾಕಿದ್ದಾರೆ. ಮೊಬೈಲ್ ನಲ್ಲಿರೋ ಸಾಕ್ಷಿ ನಾಶ ಮಾಡುವ ಕೆಲಸ ಮಾಡಿದ್ದಾರೆ. ಇದನ್ನೂ ಓದಿ :- PSI ಅಕ್ರಮದಲ್ಲಿ ಅರೆಸ್ಟ್ ಆದ ದಿವ್ಯಾ ಹಾಗರಗಿ ಹೈಡ್ರಾಮಾ
ಆದ್ರು ದಿವ್ಯಾ ಹಾಗರಗಿ ಸೇರಿದಂತೆ ಆರೋಪಿಗಳ ಬಳಿಯಿದ್ದ ಮೊಬೈಲ್ ನನ್ನು ಸಿಐಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಿಕೊಂಡಿರೋ ಮೊಬೈಲ್ ನಲ್ಲಿ ಏನಾದರು ಇದೆಯಾ ಅನ್ನೋದರ ಪರಿಶೀಲನೆಗೆ ಮುಂದಾಗಿದ್ದಾರೆ. ಆದ್ರೆ ಆರೋಪಿಗಳು ಮೊಬೈಲ್ ನಲ್ಲಿರೋ ಬಹುತೇಕ ಡಾಟಾ ಡಿಲಿಟ್ ಮಾಡಿದ್ದಾರೆ ತಿಳಿದದು ಬಂದಿದೆ.
ಇದನ್ನೂ ಓದಿ :- ಪಿಎಸ್ ಐ ಪರೀಕ್ಷೆ ಅಕ್ರಮ ಪ್ರಕರಣ – ಪತ್ರದ ಮೂಲಕ ಸಿಐಡಿ ತರಾಟೆಗೆ ತೆಗೆದುಕೊಂಡ ಪ್ರಿಯಾಂಕ್ ಖರ್ಗೆ